ದಾವಣಗೆರೆ.ಜ.6 ;ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರವ್ಯಾಪ್ತಿಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಅಹವಾಲುಗಳನ್ನು ಆಲಿಸಿದರು.
ಪ್ರತಿ ಮಂಗಳವಾರ ನಡೆಯುವ ಜನತಾದರ್ಶನದ ಸಂದರ್ಭದಲ್ಲಿ ಜನರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಸಲಹೆಗಳನ್ನು ಗಮನದಿಂದ ಆಲಿಸುವ ಸಂಸದರು ಕೂಡಲೇ ಸಂಬಂಧಿಸಿದ ಇಲಾಖೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಜನರಿಗೆ ನ್ಯಾಯ ದೊರಕಿಸುವುದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಮತ್ತು ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿ ಮಾಡುವುದು ಜನತಾದರ್ಶನದ ಉದ್ದೇಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
