ದಾವಣಗೆರೆ : ಯಾರಾದರೂ ಕಾನೂನು ವಿರುದ್ದವಾಗಿ ನಡೆದುಕೊಂಡರೆ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್. ತೆಕ್ಕಣ್ಣನವರ್ ಹೇಳಿದರು.
ಬುಧವಾರ ಎಸ್ಪಿ ಪ್ರಧಾನ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಉಮಾಪ್ರಶಾಂತ ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್,ಅಕ್ರಮ ಮರಳು ಸಾಗಣೆ ಸೇರಿದಂತೆ ಯಾವುದೇ ತರಹದ ಕಾನೂನು ಬಾಹಿರ ಚುಟವಟಿಕೆ ಕಂಡು ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಜಿಲ್ಲೆ ಮೊದಲಿನಿಂದಲೂ ಕಾನೂನು ಸುವ್ಯವಸ್ಥೆಯಲ್ಲಿ ಸ್ವಚ್ಛನಗರಿಯೆಂಬ ಹೆಗ್ಗಳಿಕೆ ಪಡೆದಿದ್ದು, ಆ ಪರಂಪರೆಯನ್ನು ಮುಂದು ವರೆಸುವುದು ನನ್ನ ಮೊದಲ ಆದ್ಯತೆಯಾಗಿದೆ. ಪೊಲೀಸರ ಬಗ್ಗೆ ಜನರಲ್ಲಿ ಇರುವ ಭಯವನ್ನು ದೂರ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಸರ್ಕಾರ ನಮ್ಮಿಂದ ನಿರೀಕ್ಷಿಸುವ ಸೇವೆಯನ್ನು ನಿಷ್ಠೆಯಿಂದ ಜನರಿಗೆ ಒದಗಿಸುವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಸಮಾಜ ನಿರ್ಮಿಸುವುದೇ ನನ್ನ ಗುರಿ. ಡ್ರಗ್ಸ್ ಪ್ರಕರಣಗಳ ಬಗ್ಗೆ ಶಿಸ್ತುಬದ್ಧ ತನಿಖೆ ನಡೆಸುವ ಕಾರ್ಯ ಮುಂದುವರಿಸಲಾಗುವುದು. ರಾಜ್ಯದ ಇತರೆ ಭಾಗಗಳಿಂದ ನಗರಕ್ಕೆ ಆಗಮಿಸುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುವುದು.ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ
ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗ್ರಾಮದವರಾದ ಶೇಖರ್ ಹೆಚ್. ತೆಕ್ಕಣ್ಣನವರ್ ಪ್ರಾಥಮಿಕ ಶಿಕ್ಷಣ, ಬೀದರಲ್ಲಿ ವ್ಯಾಸಂಗ ಪೂರ್ಣ. 2008 ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪ್ರಥಮ ಡಿಎಸ್ಪಿಯಾಗಿ ಅಧಿಕಾರ ಸ್ವೀಕಾರ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಬೆಂಗಳೂರು, ಮೈಸೂರು,ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆ ಕಾರ್ಯನಿರ್ವಹಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ದಾವಣಗೆರೆ ಎಸ್ಪಿ ಕಾರ್ಯನಿರ್ವಹಿಸಿದ್ದ ಉಮಾ ಪ್ರಶಾಂತ ಅವರ ವರ್ಗಾವಣೆ ಮಾಡಿದೆ.
