Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: February 13, 2026 4:53 pm
Dinamaana Kannada News
Share
Davanagere
SHARE
ದಾವಣಗೆರೆ ಫೆ.13 : ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗAಗಾಧರಸ್ವಾಮಿ ತಿಳಿಸಿದರು. ,
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ.
Read also : ಬರದ ನಾಡಿನಿಂದ ಹಿಮಾಲಯ ಪರ್ವತಕ್ಕೆ ಕಣ್ವ ಕುಪ್ಪೆ ಶ್ರೀಗಳು
ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು. ಮಂಡಳಿಯಿಂದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು
ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿ ಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಕಣ್ವ ಕುಪ್ಪೆ ಶ್ರೀಗಳು ಬರದ ನಾಡಿನಿಂದ ಹಿಮಾಲಯ ಪರ್ವತಕ್ಕೆ ಕಣ್ವ ಕುಪ್ಪೆ ಶ್ರೀಗಳು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು

ಸಂವಿಧಾನದ 16 (4) ನೇ ವಿಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿಗದಿಪಡಿಸುವ ಅವಕಾಶವನ್ನು ಪ್ರಭುತ್ವಕ್ಕೆ ನೀಡಲಾಗಿದೆ.ಇದನ್ನು ಬಳಸಿಕೊಂಡು  ಮುಖ್ಯಮಂತ್ರಿ ದೇವರಾಜ…

By Dinamaana Kannada News

DAVANAGERE NEWS : ಹರ್ ಘರ್ ತಿರಂಗಾ ಕಾರ್ಯಕ್ರಮ

ಹರಿಹರ  (DAVANAGERE)  : ಶ್ರೀ ವಿದ್ಯಾನಿಧಿ ಫೌಂಡೇಶನ್ ಟ್ರಸ್ಟ್ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜವನ್ನು…

By Dinamaana Kannada News

ಕನ್ನಡ ರಾಜ್ಯೋತ್ಸವ|ಕನ್ನಡವೇ ಸತ್ಯ,ಕನ್ನಡವೇ ನಿತ್ಯವಾಗಬೇಕಾದರೆ…..:

ಕನ್ನಡ ನಾಡು -ನುಡಿ 2000  ವರ್ಷಗಳ ಇತಿಹಾಸವನ್ನು ಹೊಂದಿದ್ದು, ಸಾಂಸ್ಕೃತಿಕವಾಗಿ, ಸಾಹಿತಿಕವಾಗಿ, ಐತಿಹಾಸಿಕವಾಗಿ ದಿವ್ಯ ಪರಂಪರೆ ಯನ್ನು ಉಳಿಸಿಕೊಂಡು ಬಂದಿದೆ.…

By ಗೀತಾ ಭರಮಸಾಗರ

You Might Also Like

ಕಣ್ವ ಕುಪ್ಪೆ ಶ್ರೀಗಳು
ತಾಜಾ ಸುದ್ದಿ

ಬರದ ನಾಡಿನಿಂದ ಹಿಮಾಲಯ ಪರ್ವತಕ್ಕೆ ಕಣ್ವ ಕುಪ್ಪೆ ಶ್ರೀಗಳು

By Dinamaana Kannada News
Davanagere
ತಾಜಾ ಸುದ್ದಿ

ಎ.ವಿ.ಕಮಲಮ್ಮ ಮಹಿಳಾ ಕಾಲೇಜ್ : ತಂಬಾಕು ಸೇವನೆ ಜಾಗೃತಿ ಕಾರ್ಯಕ್ರಮ

By Dinamaana Kannada News
Darshan Kurubas
ಅಭಿಪ್ರಾಯ

ನೀಟ್|ವೈದ್ಯಕೀಯ ಆಕಾಂಕ್ಷಿಗಳ ಸಾವು ನೋವು: ಲೇಖನ ದರ್ಶನ್ ಕುರುಬಾಸ್

By Dinamaana Kannada News
Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?