ಜಗಳೂರು : ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ವಿವಿಧ ಇಲಾಖೆಯ ಕಚೇರಿಗಳಲ್ಲಿ ಆಚರಣೆ ಮಾಡದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೇವಾಲಾಲ್ ಬಂಜಾರ ಸಂಘದ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸೋಮವಾರ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿದ ಸಮುದಾಯದ ಮುಖಂಡರುಗಳು ತಮ್ಮ ಬೇಡಿಕೆಯ ಪಟ್ಟಿಯನ್ನು ಗ್ರೇಡ್ -2 ತಹಶೀಲ್ದಾರ್ ಮಂಜಾನಂದಗೆ ಸಲ್ಲಿಸಿದರು.
ವೇಳೆ ಧರ್ಮನಾಯ್ಕ ಮಾತನಾಡಿ, ದಾರ್ಶನಿಕರ ಜಯಂತಿಗಳನ್ನು ಆಚರಣೆ ಮಾಡದೆ ಅಪಮಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಸರ್ಕಾರದ ನಿಯಮಗಳನ್ನು ಅಧಿಕಾರಿಗಳಾದ ನೀವು ಪಾಲಿಸಬೇಕು ಇಲ್ಲದಿದ್ದರೆ ನಾವು ಮಾಡುವುದಿಲ್ಲ ಎಂದು ಸರ್ಕಾರಕ್ಕೆ ತಿಳಿಸಿಬಿಡಿ ಇಂತಹ ಕೆಲಸವನ್ನು ಏಕೆ ಮಾಡುತ್ತೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದವರು ತಾಲೂಕಿನ ಗುರುಸಿದ್ಧಾಪುರ ಗ್ರಾಮದ ರಂಗಯ್ಯನದುರ್ಗ ಕೊಂಡ ಕುರಿ ವಲಯ ಅರಣ್ಯ ಇಲಾಖೆಯಲ್ಲಿ ಕೆಲಶಾಲೆ ಗಳಲ್ಲಿ , ಕಚೇರಿಗಳಲ್ಲಿ ಜಯಂತಿಯನ್ನು ಆಚರಣೆ ಮಾಡದೆ ಅಪಮಾನ ಮಾಡಿದ್ದಾರೆ ಎಂದು ತೋರಿದರು.
ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ನಾಯಕ ಮಾತನಾಡಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡದೇ ಇರುವ ಅಧಿಕಾರಿಗಳು ತಮ್ಮ ತಪ್ಪನ್ನು ತಿದ್ದುಕೊಂಡು ಆಚರಣೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಕಾರ್ಯದರ್ಶಿ ಕೃಷ್ಣಮೂರ್ತಿ ನಾಯಕ ಮಾತನಾಡಿ ಸರ್ಕಾರದ ಆದೇಶಗಳನ್ನು ಗಾಳಿಗೆ ತರುವಂಥಹ ಅಧಿಕಾರಿಗಳು ಇನ್ನು ಸಾರ್ವಜನಿಕರಿಗೆ ಹೇಗೆ ಆಡಳಿತ ನೀಡುತ್ತಾರೆ ಸಂತ ಸೇವಾಲಾಲ್ ರವರು ದಲಿತ ಸಮುದಾಯಕ್ಕೆ ಸೇರಿದವರೆಂದು ಆಚರಣೆ ಮಾಡದೆ ತಮ್ಮ ಮನಸ್ಥಿತಿಯನ್ನು ತೋರಿಸಿದ್ದಾರೆ ದಿನಗಳಲ್ಲಿ ಎಲ್ಲಾ ಜಯಂತಿಗಳನ್ನು ಕಡ್ಡಾಯವಾಗಿ ಆಚರಣೆ ಮಾಡದೇ ಹೋದರೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
