ಜಗಳೂರು: ವಿಬಿಜಿ ರಾಮ್ ಜಿ ಯೋಜನೆಯು ಕೂಲಿ ಕಾರ್ಮಿಕರಿಗೆ ವರದಾನವಾಗಲಿದೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.
ಮಂಗಳವಾರ ತಾಲೂಕಿನ ಕೆಚ್ಚೇನಳ್ಳಿ,ದೊಣ್ಣೆ ಹಳ್ಳಿ ಕಲ್ಲೇ ದೇವರಪುರ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಗ್ರಾಮಗಳಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಮುಂದಾಲೋಚನೆ ಇಟ್ಟುಕೊಂಡು ಯೋಜನೆಯ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ ವಿನಹ ಯೋಜನೆಯನ್ನೇ ಬದಲಾವಣೆ ಮಾಡಿಲ್ಲ ಆದರೆ ವಿರೋಧ ಪಕ್ಷದವರು ಸುಖ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.
ಈ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ 125 ದಿನಗಳ ಕಾಲ ಕೂಲಿ ಕೆಲಸ ದೊರೆಯಲಿದೆ ಕೂಲಿ ಹಣವನ್ನು ರೈತರ ಖಾತೆಗಳಿಗೆ ಸಮರ್ಪಕವಾಗಿ ಜಮಾ ಮಾಡುವಂತಹ ವ್ಯವಸ್ಥೆ ಮಾಡಲಾಗಿದ್ದು, ಈ ಯೋಜನೆಯಿಂದ ಕೂಲಿ ಕಾರ್ಮಿಕರು ಬಾಳು ಬಂಗಾರವಾಗಲಿದೆ. ಹಾಗಾಗಿ ಪಕ್ಷದ ವತಿಯಿಂದ ಜಾಗೃತಿ ಮೂಡಿಸುವಂತಹ ಕೆಲಸ ನಡೆಯುತ್ತಿದ್ದು ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ವಿಜಿ ರಾಮ್ ಜಿ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸ ಕಾರ್ಯಕರ್ತರು ಮಾಡಲಿದ್ದಾರೆ. ಮುಂಬರುವ ಗ್ರಾಮ ಪಂಚಾಯತಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎ.ಎಂ ಮರುಳಾರಾಧ್ಯ ಮಾತನಾಡಿ, ಬಡ ಕೂಲಿ ಕಾರ್ಮಿಕರಿಗೆ ಯೋಜನೆಯು ಸಂಜೀವಿನಿಯಾಗಲಿದೆ ಈ ಹಿಂದೆ ನೂರು ದಿನಗಳ ಕಾಲ ಕೂಲಿ ಕೆಲಸ ನೀಡಲಾಗುತ್ತಿತ್ತು. ಈಗ 25 ದಿನಗಳ ಹೆಚ್ಚಿಗೆ ಮಾಡಿ ಒಟ್ಟು 125 ದಿನಗಳ ಕಾಲ ಯೋಜನೆಯಡಿ ಕೆಲಸ ನೀಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ : ದಾವಣಗೆರೆ : ಜಲಸಿರಿ ಕೌಂಟರ್ನಲ್ಲಿ ನೀರಿನ ಶುಲ್ಕ ಪಾವತಿಸಿ
ಪ್ರಧಾನ ಕಾರ್ಯದರ್ಶಿ ಧರ್ಮನಾಯ್ಕ ಮಾತನಾಡಿ, ಪ್ರಧಾನಮಂತ್ರಿಯವರು ದೇಶದ ಅಭಿವೃದ್ಧಿಗೆ ಪಣತೊಟ್ಟ ನಿಂತಿದ್ದು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಈಗ ನರೇಗಾ ಯೋಜನೆಯ ಹೆಸರನ್ನು ಬದಲಾವಣೆ ಮಾಡಿದ್ದಾರೆ ವಿನಃ ಯಾವುದೇ ಬದಲಾವಣೆಯಾಗಿರುವುದಿಲ್ಲ ನಕುಲಿ ಕಾರ್ಮಿಕರಿಗೆ ಯೋಜನೆಯು ಅನುಕೂಲವಾಗಲಿದೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ಮಾಜಿ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯತಿ ಸದಸ್ಯರುಗಳು ಹಾಜರಿದ್ದರು
