Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ
ತಾಜಾ ಸುದ್ದಿ

ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ

Dinamaana Kannada News
Last updated: February 20, 2026 2:01 pm
Dinamaana Kannada News
Share
Davanagere
SHARE

ದಾವಣಗೆರೆ ಫೆ.20 : ಕಳೆದ ಮೂರು ದಿನಗಳಿಂದ ದಾವಣಗೆರೆ ಜಿಲ್ಲೆಯಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟಿ ನೀಡಿ, ಆಹಾರ ಮತ್ತು ಪೌಷ್ಟಿಕಾಂಶ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದ್ದು  ಜಿಲ್ಲೆಯಲ್ಲಿನ ಆಹಾರ ಭದ್ರತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಭದ್ರತೆ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ  ತಿಳಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಆಯೋಗದ ತಂಡವು ಜಿಲ್ಲೆಯ ಅಕ್ಕಿ ಗೋದಾಮುಗಳು, ನ್ಯಾಯಬೆಲೆ ಅಂಗಡಿಗಳು, ಸರ್ಕಾರಿ ಹಾಸ್ಟೆಲ್‍ಗಳು, ಬಿಸಿಯೂಟದ ಶಾಲೆಗಳು, ಎಂ.ಎಸ್.ಪಿ (MSP) ಖರೀದಿ ಕೇಂದ್ರಗಳು, ಅಂಗನವಾಡಿಗಳು, ನಿರಾಶ್ರಿತರ ಪರಿಹಾರ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು ಮತ್ತು ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪರಿಶೀಲನೆಯ ವೇಳೆ ಕಂಡುಬಂದ ನ್ಯೂನತೆಗಳಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ, ಗೋದಾಮು ವ್ಯವಸ್ಥಾಪಕರು ಸೇರಿದಂತೆ ಒಟ್ಟು ಏಳು ಅಧಿಕಾರಿ, ಸಿಬ್ಬಂದಿಗಳಿಗೆ ಆಯೋಗವು ನೋಟಿಸ್ ಜಾರಿ ಮಾಡಿದೆ ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಭಾಗದ ಗೋದಾಮುಗಳಲ್ಲಿ ಭೌತಿಕ ದಾಸ್ತಾನು ಮತ್ತು ಕಂಪ್ಯೂಟರ್ ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.  ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರವಾದ ಮೊಟ್ಟೆ, ಅಕ್ಕಿ ಇತ್ಯಾದಿ ವಿತರಣೆಯಲ್ಲಿ ಕೆಲವು ಕಡೆ ವ್ಯತ್ಯಾಸಗಳು ಕಂಡುಬಂದಿವೆ. ತಿಂಗಳಿಗೆ 24 ಮೊಟ್ಟೆಗಳನ್ನು ನೀಡುವ ನಿಯಮವಿದ್ದರೂ, ಕೆಲವು ಕಡೆ ಕಡಿಮೆ ವಿತರಣೆಯಾಗುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಆಸ್ಪತ್ರೆಗೆ ದಾಖಲಿಸಲು ಮತ್ತು ಅಂತಹ ಮಕ್ಕಳ ಪೋಷಕರಿಗೆ 15 ದಿನಗಳಿಗೆ  ಪ್ರತಿದಿನ ₹370 ಭತ್ಯೆಯನ್ನು ತಕ್ಷಣವೇ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

Read also : ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

ಆಹಾರ ವಿತರಣೆಯಲ್ಲಿ ಭ್ರಷ್ಟಾಚಾರ  ಅಥವಾ ಪಡಿತರ ಅಕ್ಕಿಯನ್ನು ಮರುಮಾರಾಟ ಮಾಡುವಂತಹ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ಆಯೋಗದ ಗಮನಕ್ಕೆ ಲಿಖಿತ ರೂಪದಲ್ಲಿ ಅಥವಾ  ಮೊಬೈಲ್ ಸಂಖ್ಯೆ 94448 46609 ಗೆ ದೂರನ್ನು ನೀಡಬಹುದು.  ಜಿಲ್ಲೆಯ ಎಲ್ಲಾ 14 ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ, ಸರ್ಕಾರದ ಸೌಲಭ್ಯಗಳು ಪ್ರಾಮಾಣಿಕವಾಗಿ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಆಹಾರ ಭದ್ರತಾ ಆಯೋಗದ ಸದಸ್ಯರಾದ ಲಿಂಗರಾಜ್ ಕೋಟೆ , ಸುಮಂತ್ ರಾವ್, ಮಾರುತಿ ದೊಡ್ಡಲಿಂಗಣ್ಣ,   ಕೆ.ಎಸ್. ವಿಜಯಲಕ್ಷ್ಮಿ,  ರೋಹಿಣಿ ಪ್ರಿಯಾ,  ಸದಸ್ಯ ಕಾರ್ಯದರ್ಶಿ ಮತ್ತು ಅಪರ ನಿರ್ದೇಶಕರಾದ ಸುಜಾತಾ ಹೊಸಮನಿ ಈ ವೇಳೆ ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅಗಸ್ಟ್ 28  :   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ…

By Dinamaana Kannada News

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ. -ಲೆನಿನ್ ಶಿಕ್ಷಣ, ಆರೋಗ್ಯ, ಉದ್ಯೋಗ ರಾಜಕೀಯ ಸೇರಿದಂತೆ ಎಲ್ಲ…

By Dinamaana Kannada News

ಅಸ್ಪ್ರಶ್ಯತಾ ನಿವಾರಣೆ ಹೋರಾಟದ ಮಹಾನ್ ನಾಯಕ

ದಾವಣಗೆರೆ ಏ.05 :   ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

By Dinamaana Kannada News
ನ್ಯಾ. ಮಹಾವೀರ ಮ. ಕರೆಣ್ಣವರ
ಅಭಿಪ್ರಾಯ

ಫೆ. 20 ವಿಶ್ವ ಸಾಮಾಜಿಕ ನ್ಯಾಯ ದಿನ : ಸಮಾನತೆ ಮತ್ತು ಘನತೆಯೇ ಸಮಾಜದ ಅಡಿಪಾಯ

By ನ್ಯಾ.ಮಹಾವೀರ ಮ. ಕರೆಣ್ಣವರ
Davanagere
ತಾಜಾ ಸುದ್ದಿ

ಪೌತಿ ಖಾತೆ:ರೈತರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ತಹಶೀಲ್ದಾರ್ ಸೈಯ್ಯದ್ ಕಲೀಮುಲ್ಲಾ

By Dinamaana Kannada News
Davanagere
ತಾಜಾ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?