Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉದ್ಯೋಗ ಮೇಳ|ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ:ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಉದ್ಯೋಗ ಮೇಳ|ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ:ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: February 23, 2026 1:39 pm
Dinamaana Kannada News
Share
Davanagere
SHARE

ದಾವಣಗೆರೆ ಫೆ. 23  : ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು.  ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿ ಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ. ಜೊತೆಗೆ  ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ.

ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.  ಯುವಕರು  ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ  ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್  ಕೋರ್ಸ್ಗಳಲ್ಲಿ ಭಾಗವಹಿಸಬೇಕು ಎಂದರು.

ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು  ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು  ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎA ಮಾತನಾಡಿ  ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು.

ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು.

ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು,

ಸ್ಥಳದಲ್ಲೇ ನೇಮಕಾತಿ:  421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

Read also : 9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಉದ್ಯೋಗ ಮೇಳಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere 9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ
Next Article Davanagere ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸನ್ ರೈಸ್ ಪ್ರಿ ಸ್ಕೂಲ್ ನಲ್ಲಿ  ಮಕ್ಕಳಿಂದ ಕೃಷ್ಣ ಜನ್ಮಾಷ್ಠಮಿ

ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆ, ಸನ್ ರೈಸ್ ಪ್ರಿ ಸ್ಕೂಲ್ ನಲ್ಲಿ  ಮಕ್ಕಳಿಂದ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು. Read…

By Dinamaana Kannada News

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ…

By Dinamaana Kannada News

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ

ಜಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ  ದಿನದ 24 ಗಂಟೆಗಳ ಕಾಲ ಮಕ್ಕಳಿಗೆ ಬೋಧನೆಯ ಜೊತೆಗೆ …

By Dinamaana Kannada News

You Might Also Like

jagalore
ತಾಜಾ ಸುದ್ದಿ

ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

By Dinamaana Kannada News
Davanagere
ತಾಜಾ ಸುದ್ದಿ

ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು

By Dinamaana Kannada News
Davanagere
ತಾಜಾ ಸುದ್ದಿ

9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

By Dinamaana Kannada News
Davanagere
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?