Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರಕಾರ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವವನ್ನೂ ಲೋಕಾದ್ಯಂತ ಆಚರಿಸಲಿ : ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀ
ತಾಜಾ ಸುದ್ದಿ

ಸರಕಾರ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವವನ್ನೂ ಲೋಕಾದ್ಯಂತ ಆಚರಿಸಲಿ : ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀ

Dinamaana Kannada News
Last updated: February 24, 2026 11:00 am
Dinamaana Kannada News
Share
Davanagere
SHARE
ದಾವಣಗೆರೆ : ಸರ್ಕಾರದಿಂದ ಹಲವು ಮಹನೀಯರ ಜಯಂತಿ ಮಾಡುವಂತೆ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವವನ್ನೂ ಲೋಕಾದ್ಯಂತ ಆಚರಿಸಬೇಕು ಎಂದು ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು.
ನಗರದ ದೀಕ್ಷಿತ್ ರಸ್ತೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವ ಅಂಗವಾಗಿ ಮಂಗಳವಾರ ಸಂಸ್ಥಾನ ಪೂಜೆ ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು.
ಅಂಬೇಡ್ಕರ್ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ, ಗಾಂಧಿ ಜಯಂತಿಯಂದು ಸರ್ಕಾರ ರಜೆಯನ್ನೇ ಘೋಷಣೆ ಮಾಡುತ್ತದೆ. ಅದೇ ರೀತಿ ಮಹಾ ಮಹಿಮರಾದ ರಾಯರ ಜಯಂತಿಯನ್ನೂ ಎಲ್ಲೆಡೆ ವೈಭವದಿಂದ ಆಚರಿಸುವಂತಾಗಬೇಕು. ಅಧಿಕಾರಿಗಳು ಇದನ್ನು ಗಮನಿಸಬೇಕು ಎಂದು ಹೇಳಿದರು.
ರಾಯರು ಮಾಡಿದ ಉಪಕಾರ ಅಷ್ಟಿಷ್ಟಲ್ಲ. ಅವರು ಅವತಾರ ಮಾಡದೇ ಇದ್ದಿದ್ದರೆ ಏನಾಗುತ್ತಿತ್ತು ಎಂದು ಯೋಚಿಸಬೇಕಾಗಿದೆ. ಅಂಥ ಮಹಾ ಮಹಿಮರು ರಾಘವೇಂದ್ರ ಸ್ವಾಮಿಗಳು ಎಂದು ತಿಳಿಸಿದರು.
ಸೂರ್ಯನ ಪ್ರಕಾಶ, ಚಂದ್ರನ ಬೆಳಕು, ನವಗ್ರಹಗಳ ಪ್ರಭೆ, ನಕ್ಷತ್ರ ಪುಂಜಗಳ ಪ್ರಕಾಶ, ವಜ್ರಾದಿ ಮಣಿಗಳ ಹೊಳಪು, ಸಾವಿರಾರು ಮಿಂಚುಗಳ ಬೆಳಕನ್ನು ಒಟ್ಟುಗೂಡಿಸಿದರೆ ರಾಯರ ಜ್ಞಾನದ ಬೆಳಕಿಗೆ ಸಮವಾಗುತ್ತದೆ. ಅವರ ಗ್ರಂಥಗಳ ಹೆಸರಿನಲ್ಲಿ ‘ದೀಪ’ ಎಂಬ ಶಬ್ದ ಸಾಮಾನ್ಯವಾಗಿ ಇರುವುದನ್ನು ಗಮನಿಸಬಹುದು ಎಂದು ಹೇಳಿದರು.
ಇದೇ ವೇಳೆ ಶ್ರೀ ಗುರುರಾಜ ಸೇವಾ ಸಂಘದಿಂದ ಶ್ರೀಪಾದಂಗಳವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೊ.ಸ. ಪ್ರಸನ್ನ ಕುಮಾರ್, ಸದಸ್ಯರಾದ ಗುರುರಾಜಾಚಾರ್ಯ ಕಂಪ್ಲಿ, ಡಾ. ಆನಂದತೀರ್ಥಾಚಾರ್ ಸಿ.ಕೆ, ಕಾರ್ಯದರ್ಶಿ ಎನ್. ಸುಬ್ರಹ್ಮಣ್ಯರಾವ್ ನರಗನಹಳ್ಳಿ, ಖಜಾಂಚಿ ವಾಗೀಶಾಚಾರ್ ಎಂ, ಪ್ರಾಣೇಶಾಚಾರ್ ಕಡೂರು, ವಾಚಸ್ಪತಿ ಆಚಾರ್ಯ, ಎನ್.ಡಿ. ಶ್ರೀನಿವಾಸರಾವ್ ನರಗನಹಳ್ಳಿ, ವೆಂಕಟೇಶ ನವರತ್ನ, ಪಿ.ಕೆ. ಪ್ರಕಾಶ್ ಇದ್ದರು.
 ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ಪರಮಾತ್ಮನ ಪ್ರತಿನಿಧಿಯಾಗಿ ಬಂದು, ಭಗವಂತನ ಪ್ರಜೆಗಳಾದ ಭಕ್ತರನ್ನು ಉದ್ಧಾರ ಮಾಡಿದವರು ಎಂದು ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು ಬಣ್ಣಿಸಿದರು.
 ರಾಯರ ಮಹಿಮೆ ಅಪಾರವಾದುದು. ಪ್ರತಿಯೊಬ್ಬರ ಜೀವನದಲ್ಲೂ ಅವರು ಅನುಗ್ರಹ ಮಾಡಿದ್ದಾರೆ. ಅನೇಕರಿಗೆ ಆರೋಗ್ಯ, ಸಂತಾನ ಮುಂತಾದ ಭಾಗ್ಯಗಳನ್ನು ಕರುಣಿಸಿದ್ದಾರೆ. ಲೌಕಿಕ ಮತ್ತು ಆಧ್ಯಾತ್ಮಿಕವಾಗಿ ಭಕ್ತರಿಗೆ ಬೇಕಾಗಿದ್ದನ್ನು ನೀಡಿದ್ದಾರೆ ಎಂದು ತಿಳಿಸಿದರು.
 ಗುರು ಸಾರ್ವಭೌಮರು ಸಮುದ್ರವಿದ್ದಂತೆ. ಗಂಗೆ, ತುಂಗಭದ್ರೆ ಮುಂತಾದ ನದಿಗಳೆಲ್ಲವೂ ಸಾಗರವನ್ನು ಸೇರುವಂತೆ ಅವರು ಜ್ಞಾನದ ನಿಧಿಯಾಗಿದ್ದಾರೆ, ಮೋಕ್ಷದ ದಾರಿಯನ್ನು ತೋರುತ್ತಾರೆ ಎಂದು ಹೇಳಿದರು.
ರಾಘವೇಂದ್ರ ಸ್ವಾಮಿಗಳ ನಾಲಿಗೆಯು ಸರಸ್ವತಿ ದೇವಿಯ ರಂಗಸ್ಥಳವಾಗಿತ್ತು, ಅಷ್ಟು ಜ್ಞಾನ ಅವರಲ್ಲಿತ್ತು. ರಾಯರ ವಾಗ್ಗಂಗೆಯು ಭಗವಂತನ ಸ್ವರೂಪವನ್ನು ತಿಳಿಸುತ್ತದೆ ಎಂದರು.
ರಾಯರ ಮೃತ್ತಿಕೆಗೆ ಮಹತ್ವವಿದೆ. ಮೃತ್ತಿಕಾ ವೃಂದಾವನದಲ್ಲಿ ಗುರುಗಳ ಸನ್ನಿಧಾನವಿರುತ್ತದೆ. ಮಠಕ್ಕೆ ಆಗಮಿಸಿ ರಾಯರ ದರ್ಶನ ಪಡೆಯಬೇಕು, ಅವರ ನಿರಂತರ ಸೇವೆಯಿಂದ ಎಲ್ಲರಿಗೂ ಶ್ರೇಯಸ್ಸಾಗಲಿ ಎಂದು ಹಾರೈಸಿದರು.
ಗೋಪಾಲ ದಾಸರ ಸುಳಾದಿ (ರಾಘವೇಂದ್ರ ಸ್ವಾಮಿಗಳ ಬಗ್ಗೆ) ಕುರಿತು ಪಂಡಿತ ಪವಮಾನಾಚಾರ್ಯ ಪಂಚಮುಖಿ ಅವರು, ‘ಶ್ರೀ ರಾಘವೇಂದ್ರ ವಿಜಯ-ಸನ್ಯಾಸ ವರ್ಣನೆ’ ಕುರಿತು ಬೆಂಗಳೂರಿನ ಪಂಡಿತ ಆಯನೂರು ಮಧುಸೂದನಾಚಾರ್ಯ, ‘ಮಹಾಭಾರತ ತಾತ್ಪರ್ಯ ನಿರ್ಣಯ’ ಕುರಿತು ಪಂಡಿತ ಪ್ರಾಣೇಶಾಚಾರ್ಯ ಕಡೂರು ಪ್ರವಚನ ನೀಡಿದರು.
Read also : ಹಿಮ್ಮಡಿ ನೋವು ಬರಲು ಕಾರಣ ಮತ್ತು ಆಯುರ್ವೇದ ಚಿಕಿತ್ಸೆ : ಡಾ.ಬಿ.ಶಿವಕುಮಾರ್
 ಸಂಜೆ ಪಂಡಿತ್ ಆನಂದ ಪಾಟೀಲ್ ಅವರಿಂದ ‘ದಾಸ ವಾರಿಧಿ’ ಸಂಗೀತ ಕಾರ್ಯಕ್ರಮ ನೆರವೇರಿತು. ಶಿರಸಿಯ ಪಂಡಿತ್ ಚಿನ್ಮಯ ಭಟ್ (ಹಾರ್ಮೋನಿಯಂ), ಧಾರವಾಡದ ಪಂಡಿತ್ ಪ್ರಸಾದ್ ಮಡಿವಾಳರ (ತಬಲಾ) ಸಾಥ್ ನೀಡಿದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು
Share This Article
Twitter Email Copy Link Print
Previous Article Dr. B. Shivakumar ಹಿಮ್ಮಡಿ ನೋವು ಬರಲು ಕಾರಣ ಮತ್ತು ಆಯುರ್ವೇದ ಚಿಕಿತ್ಸೆ : ಡಾ.ಬಿ.ಶಿವಕುಮಾರ್
Next Article Davanagere ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ

ದಾವಣಗೆರೆ (Davanagere):  ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅವರು ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ತಮ್ಮ ಗೃಹ ಕಚೇರಿಯ ಆವರಣದಲ್ಲಿ ಕೊಟ್ಯಾಕ್ ಮಹೇಂದ್ರ ಬ್ಯಾಂಕಿನಿಂದ ರೂ.39 ಲಕ್ಷ ರೂಪಾಯಿ ವೆಚ್ಚದ ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಸಾರ್ವಜನಿಕರ ಸೇವೆಗೆ ನೀಡಲಾಗಿದ್ದು, ಅದರ ಹಸ್ತಾಂತರ ಕಾರ್ಯವನ್ನು ನಡೆಸಲಾಯಿತು.…

By Dinamaana Kannada News

Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್

ಹರಿಹರ (Davangere District): ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ  ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್…

By Dinamaana Kannada News

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

ದಾವಣಗೆರೆ: ಭಾರತ ದೇಶದಲ್ಲಿ ಯಾರೂ ಕರೆದು ನಮಗೆ ಅವಕಾಶ ಕೊಡುವುದಿಲ್ಲ. ಜ್ಞಾನ ಬೆಳೆಸಿಕೊಳ್ಳುವ ಮೂಲಕ ನಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡಾಗ ಜೀವನದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?