ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳು ಸಹಯೋಗ, ಸಮನ್ವಯದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ, ಅರಿವು ಮೂಡಿಸಲು ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ನಡೆಸಲು ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ.26 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Read also : SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
