ದಾವಣಗೆರೆ,ಮಾರ್ಚ್.2 : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಪ್ರಸ್ತುತ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಇರಾನ್, ಇಸ್ರೇಲ್, ಯುಎಇ ಸೇರಿದಂತೆ ಹಲವು ದೇಶಗಳ ವಾಯುಪ್ರದೇಶವನ್ನುಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಒಟ್ಟು 9 ನಾಗರಿಕರು ಪ್ರಸ್ತುತ ಯುಎಇ (ದುಬೈ) ನಲ್ಲಿ ಸಿಲುಕಿಕೊಂಡಿರುವುದು ವರದಿಯಾಗಿದೆ.
ದಾವಣಗೆರೆ ಜಿಲ್ಲೆಯ ಸಂಕಷ್ಟದಲ್ಲಿರುವ ನಾಗರಿಕರ ನೆರವಿಗಾಗಿ ಜಿಲ್ಲಾಡಳಿತವು ಈ ಕೆಳಗಿನ ಕ್ರಮಗಳನ್ನು ಕೈಗೊಂಡಿದೆ:
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವು 24×7 ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ದಾವಣಗೆರೆ ಜಿಲ್ಲೆಯ ಪ್ರಯಾಣಿಕರು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ನೆರವಿಗಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆ 08192-234034 ಸಂಖ್ಯೆಗೆ ಸಂಪರ್ಕಿಸಬಹುದು.
ಬಾಧಿತ ದೇಶಗಳಲ್ಲಿರುವ ದಾವಣಗೆರೆಯ ನಾಗರಿಕರು ಭಾರತೀಯ ರಾಯಭಾರ ಕಚೇರಿ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಕೂಡಲೇ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್ (https://www.meaers.com/request/home) ನಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.