Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿ ಆಗಲಿ ಒಕ್ಕೂರೆಲಿನ ಆಗ್ರಹ
Blogತಾಜಾ ಸುದ್ದಿ

ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿ ಆಗಲಿ ಒಕ್ಕೂರೆಲಿನ ಆಗ್ರಹ

Dinamaana Kannada News
Last updated: March 12, 2024 5:35 am
Dinamaana Kannada News
Share
Prabha Mallikarjun Lok Sabha Candidate
Prabha Mallikarjun Lok Sabha Candidate
SHARE

ದಾವಣಗೆರೆ:
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.
ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡರು.
ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಪ್ರತಿಯೊಂದು ಚುನಾವಣೆಗಳಲ್ಲಿ ಮತದಾರರ ಬಳಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಕ್ಷೇತ್ರದ ಜನತೆಯ ಮನೆ ಮಾತಾಗಿದ್ದಾರೆ. ಅವರ ಸ್ಪರ್ಧೆಯಿಂದ ಲಕ್ಷಕ್ಕೂ ಹೆಚ್ಚು ಮತಗಳಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಪ್ರಭಾ ಮಲ್ಲಿಕಾರ್ಜುನ್ ಅಭ್ಯರ್ಥಿಯಾದರೆ ಪಕ್ಷಕ್ಕೆ ಅನುಕೂಲ

ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ನೂರಾರು ಆರೋಗ್ಯ ಶಿಬಿರಗಳನ್ನು ನಡೆಸಿ ಅನೇಕರ ಬಾಳಲ್ಲಿ ಆಶಾಕಿರಣವಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರತಿನಿತ್ಯ ನೂರಾರು ಸಾರ್ವಜನಿಕರನ್ನು ಭೇಟಿ ಮಾಡಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಅವರು ಅಭ್ಯರ್ಥಿ ಆದರೆ ನಮ್ಮ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ವರಿಷ್ಠರ ಬಳಿ ನಿಯೋಗ

ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸಿದರೆ ದಾವಣಗೆರೆ ಲೋಕಸಭಾ ಕ್ಷೇತ್ರ ಮಾದರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಗ್ಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡೋಣ. ಅವಶ್ಯವಿದ್ದರೆ ಹೈಕಮಾಂಡ್‍ಗೂ ನಿಯೋಗ ತೆರಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆ.ಪಿ.ಸಿ.ಸಿ.ಸದಸ್ಯ ಮುದೇಗೌಡ್ರು ಗಿರೀಶ್, ನಿಟುವಳ್ಳಿ ಆರ್.ಎಸ್.ಶೇಖರಪ್ಪ, ಎ.ನಾಗರಾಜ್ ಇವರುಗಳ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಹಾಪೌರರಾದ ವಿನಾಯಕ ಪೈಲ್ವಾನ್, ಬಿ.ಹೆಚ್.ವೀರಭದ್ರಪ್ಪ, ಶ್ರೀಮತಿ ಅನಿತಾಬಾಯಿ ಮಾಲತೇಶ್, ಆರ್.ಹೆಚ್.ನಾಗಭೂಷಣ್, ಎಸ್.ಮಲ್ಲಿಕಾರ್ಜುನ್, ಗುರುರಾಜ್, ಆಮ್ ಆದ್ಮಿ ಮಾಜಿ ಅಧ್ಯಕ್ಷ ರಾಘವೇಂದ್ರ, ಮಂಗಳಮ್ಮ, ಮಹಾನಗರ ಪಾಲಿಕೆ ಸದಸ್ಯರುಗಳಾದ ಅಬ್ದುಲ್ ಲತೀಫ್, ಚಮನ್‍ಸಾಬ್, ಪಾಮೇನಹಳ್ಳಿ ನಾಗರಾಜ್, ಉದಯಕುಮಾರ್, ಜಾಕೀರ್ ಅಲಿ, ಸೈಯದ್ ಚಾರ್ಲಿ, ಆಶಾ ಉಮೇಶ್, ಕಬೀರ್ ಖಾನ್, ಗಣೇಶ ಹುಲ್ಮನಿ, ಗೋಪಿನಾಯ್ಕ, ನರೇಂದ್ರ, ಉಮೇಶ್, ಕೊಟ್ರಯ್ಯ, ಲಾಲ್ ಆರೀಫ್, ಪರಸಪ್ಪ, ಪಾಪಣ್ಣಿ, ಕುಂದವಾಡದ ಮಾರುತಿ, ಕರೀಗೌಡ್ರು, ಪರಮೇಶ್, ಶಿವಶಂಕರ್, ಸುಷ್ಮಾ ಪಾಟೀಲ್, ಮೀನಾಕ್ಷಿ ಜಗದೀಶ್, ಇಟ್ಟಿಗುಡಿ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

 

TAGGED:Davangere Newsdinamaana.comPrabha Mallikarjun Lok Sabha Candidateದಾವಣಗೆರೆ ಸುದ್ದಿದಿನಮಾನ.ಕಾಂಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿ ಆಗಲಿ
Share This Article
Twitter Email Copy Link Print
Previous Article Laptop distribution ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ
Next Article dr. rajeva ಶೇ. 90 ರಷ್ಟು ಭಾರತೀಯ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ

ದಾವಣಗೆರೆ.ಆ.02  (Davangere district )   ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ…

By Dinamaana Kannada News

Kannada poem : ಡಾಲರ್ ಕಣ್ಣು

ಡಾಲರ್ ರಾಜಘಾಟಿಗೆ ಹೋಗಿ ನಮಿಸಿತು ತಲೆಬಾಗಿ ಸಾವಿರದೊಂಭೈನೂರ ನಲವತ್ತೆಂಟರ ಜನವರಿ ಮೂವತ್ತರಂದೂ ಹೀಗೆಯೇ ನಮಿಸಲಾಗಿತ್ತು. ಬೆವರ ಮೇಲೆ ನೆತ್ತರ ಮೇಲೆ…

By Dinamaana Kannada News

ದಾವಣಗೆರೆ | ಅಹಿಂದ ಪ್ರಜಾ ಶಕ್ತಿ ಸಂಘಟನೆ ತಳಮಟ್ಟದಲ್ಲಿ ಸಂಘಟಿಸಲು ನಿರ್ಧಾರ

ದಾವಣಗೆರೆ : ಅಹಿಂದ ಪ್ರಜಾ ಶಕ್ತಿ ಸಂಘಟನೆಯ ಸಭೆಯು ಸಂಘದ ಗೌರವಧ್ಯಕ್ಷ ಸೈಯದ್ ಸೈಪುಲ್ ಹಾಗೂ ರಾಜ್ಯಾಧ್ಯಕ್ಷ ಗೋವಿಂದರಾಜ್ ಅಧ್ಯಕ್ಷತೆಯಲ್ಲಿ…

By Dinamaana Kannada News

You Might Also Like

canara bank davanagere
ತಾಜಾ ಸುದ್ದಿ

ದಾವಣಗೆರೆ|ಸೈಬರ್ ವಂಚನೆಗಳಿಂದ ಗ್ರಾಹಕರು ಎಚ್ಚರ ವಹಿಸಿ 

By Dinamaana Kannada News
avk davanagere
ತಾಜಾ ಸುದ್ದಿ

ದಾವಣಗೆರೆ|ಜೀವ ರಕ್ಷಣಾ ಕೌಶಲ್ಯ ಕಲಿತು ಜೀವ ಉಳಿಸಿ : ಸುಭಾನ್ ಸಾಬ್ ನದಾಫ್

By Dinamaana Kannada News
blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?