Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   
ತಾಜಾ ಸುದ್ದಿ

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

Dinamaana Kannada News
Last updated: March 15, 2024 12:24 pm
Dinamaana Kannada News
Share
15 lakhs in the account of Indians, why Modi did not put even 15 paise? C.M. question
15 lakhs in the account of Indians, why Modi did not put even 15 paise? C.M. question
SHARE

ಮೈಸೂರು ಮಾ 15:  

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಚಾರಿತ್ರಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು ಎಂದು ನುಡಿದರು.

ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿಯ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು ಎಂದು ಪುನರುಚ್ಛರಿಸಿ  ಬಿಜೆಪಿ ನಾಯಕರಿಗೆ ತಿವಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ, ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು.

ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಹೊಸ ಸುಳ್ಳು ಹಬ್ಬಿಸಿದರು. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದರು. ಆದರೆ ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು.

ಹೀಗೆ ಬಿಜೆಪಿಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಟೀಕಿಸಿದರು.

ನಾವು ನುಡಿದಂತೆ ನಡೆದಿದ್ದೇವೆ: ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ

ನಾವು ನುಡಿದಂತೆ ನಡೆದಿದ್ದೇವೆ: ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾನು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ  ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ಎಂದು ಪ್ರಶ್ನಿಸಿ ಎಂದರು.

ಮೈಸೂರಿನ ಅಭಿವೃದ್ಧಿಗೆ-ಮೈಸೂರು ಜನತೆಯ ಪ್ರಗತಿಗೆ ಏನು ಮಾಡಿದ್ರಿ? ಬಿಜೆಪಿಗೆ ಸಿ.ಎಂ.ಪ್ರಶ್ನೆ

ಮೈಸೂರು ಜಿಲ್ಲೆಯ ಅಭಿವೃದ್ಧಿಗೆ- ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶದಿಂದ ಪ್ರಶ್ನಿಸಿದರು. ಆಸ್ಪತ್ರೆ, ಕಾಲೇಜು, ಮಾರುಕಟ್ಟೆ , ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ. ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ ಎಂದು ವಿವರಿಸಿದರು.

ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವರಾದ ಶಾಸಕ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಜಾರಿ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್ , ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಉಪಸ್ಥಿತರಿದ್ದರು. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಬೃಹತ್ ಸಮಾವೇಶದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

TAGGED:15 lakhs in the account of Indians15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   ದಿನಮಾನ.ಕಾಂDavanagere NewsDinamana.comwhy Modi did not put even 15 paise? C.M. questionದಾವಣಗೆರೆ ಸುದ್ದಿಭಾರತೀಯರ ಖಾತೆಗೆ 15 ಲಕ್ಷ ಇರಲಿ
Share This Article
Twitter Email Copy Link Print
Previous Article Dr. RENUKARADHYA AM Distric RCH OFFICER ತಾಪಮಾನ ಹೆಚ್ಚಳ: ಗರ್ಭಿಣಿಯರ ಮೇಲೆ ದುಷ್ಪರಿಣಾಮ ಗರ್ಭಿಣಿ  ಮಹಿಳೆಯರಿಗೆ ಕೆಲವು ಟಿಪ್ಸ್ ನೀಡಿದ  ಆರೋಗ್ಯ ಇಲಾಖೆ
Next Article Five inter-state robbers arrested, ಐವರು ಅಂತರ್ ರಾಜ್ಯ ದರೋಡೆಕೋರರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ

ದಾವಣಗೆರೆ ಅ.16  (Davanagere);  ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ…

By Dinamaana Kannada News

ಜ.25-26 ರಂದು ಡಿಎಸ್‍ಎಸ್‍ನಿಂದ ರಾಜ್ಯಮಟ್ಟದ ತರಬೇತಿ ಕಾರ್ಯಗಾರ

ದಾವಣಗೆರೆ (Davanagere): ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜ.25 ಹಾಗೂ 26ರಂದು ಬೆಳಗ್ಗೆ 10ಕ್ಕೆ ಹರಿಹರ ಹೊರವಲಯದ ಬಿ.ಕೃಷ್ಣಪ್ಪನವರ…

By Dinamaana Kannada News

Davanagere | ಪಾದಾಚಾರಿ ಮಾರ್ಗ ಅತಿಕ್ರಮ : ಕ್ರಮಕ್ಕೆ ಎಸ್ಪಿ ಸೂಚನೆ

ದಾವಣಗೆರೆ (Davanagere): ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಅವರು ದಾವಣಗೆರೆ ಹಳೇಯ ಭಾಗದಲ್ಲಿ ಸಂಚಾರ ನಿರ್ವಹಣೆ ಕುರಿತು ಪರಿಶೀಲನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭಾರತಾಂಬೆಯ ಮಕ್ಕಳು ಜಯಶಾಲಿಯಾಗಿ ವಿಜಯ ಪತಾಕೆ ಹಾರಿಸಲಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಯೋಧರ ಸುರಕ್ಷತೆಗೆ ಪ್ರಾರ್ಥನೆ  : ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ

By Dinamaana Kannada News
Davanagere
ತಾಜಾ ಸುದ್ದಿ

ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ

By Dinamaana Kannada News
Thalassemia Day celebration program
ತಾಜಾ ಸುದ್ದಿ

Hemophilia | ಜೀನ್ ಥೆರಪಿ ಚಿಕಿತ್ಸೆ ನಮ್ಮ ದೇಶದಲ್ಲೂ ಬರಬಹುದು : ಐ.ಜಿ.ಪಿ ಡಾ. ರವಿಕಾಂತೇಗೌಡ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?