Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ
Blog

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ

Dinamaana Kannada News
Last updated: March 17, 2024 5:37 am
Dinamaana Kannada News
Share
Change the way you look at women
ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ
SHARE

ದಾವಣಗೆರೆ:
ಹಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದಿಂದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂತರರಾಷ್ಟ್ರೀಯ ಮಹಿಳಾ ದಿನವು ಲಿಂಗಸಮಾನತೆ ಮತ್ತು ಮಹಿಳಾ ಹಕ್ಕುಗಳ ಕುರಿತ ಅಪಾರ ಮಹತ್ವವನ್ನು ಹೊಂದಿದೆ. ವಿಶ್ವಾದ್ಯಂತ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಲಿಂಗ ಆಧಾರಿತ ತಾರತಮ್ಯ, ಹಿಂಸೆ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಅಸಮಾನ ಪ್ರವೇಶ ಸೇರಿದಂತೆ ಮಹಿಳೆಯರು ಎದುರಿಸುತ್ತಿರುವ ನಿರಂತರ ಸವಾಲುಗಳು ಮತ್ತು ಅಡೆತಡೆಗಳ ಕುರಿತು ಚರ್ಚಿಸುವ ಒಂದು ಅವಕಾಶವನ್ನು ಒದಗಿಸುತ್ತದೆ ಎಂದರು.

ಮಹಿಳಾ ಸಬಲೀಕರಣ ಕುರಿತು ಚಿಂತನೆ ಬೆಳೆಸಿಕೊಳ್ಳಬೇಕು

ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ ಇಂದಿಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲಿವೆ ಮತ್ತು ಸಮಾಜದಲ್ಲಿ ಬಾಲ್ಯ ವಿವಾಹದ ಪ್ರಕರಣ ತಗ್ಗಿಲ್ಲ. ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಅನೇಕ ಸಮಾಜ ಸುಧಾರಕರ ಪ್ರತಿಫಲದಿಂದಾಗಿ ಇಂದು ಸಮಾಜದ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ. ಸ್ತ್ರೀ ಶಕ್ತಿ ಸಂಘಗಳು ಇನ್ನೂ ಹೆಚ್ಚಾಗಿ ಮಹಿಳಾ ಸಬಲೀಕರಣ ಕುರಿತು ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ ಮಾತನಾಡಿ, ಹೆಣ್ಣಿಗೆ ಹೆಣ್ಣೇ ಶತೃ ಎಂಬ ಮಾತನ್ನು ಮೀರಿ, ಮಹಿಳೆ ಅಗಾಧವಾಗಿ ಬೆಳೆದು ಅನ್ಯೋನ್ಯತೆಯಿಂದ ಬದುಕಿದ್ದಾರೆ ಎಂದು ಹೇಳಿದರು.

ಹೋರಾಟ ಮತ್ತು ತ್ಯಾಗಗಳನ್ನು ನಾವು ಸ್ಮರಿಸಬೇಕು

ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‌ಕುಮಾರ್ ಮಾತನಾಡಿ, ಮಹಿಳೆಯರ ಸಾಧನೆಗಳನ್ನು ಗೌರವಿಸಲು ಸಮಾಜಕ್ಕೆ ಅವರ ಕೊಡುಗೆಗಳನ್ನು ಗುರುತಿಸಲು ಮತ್ತು ಲಿಂಗ ಸಮಾನತೆಗಾಗಿ ಪ್ರತಿಪಾದಿಸಲು  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಜಾಗತಿಕ ಸಂದರ್ಭವಾಗಿದೆ. ಜಗತ್ತಿನಲ್ಲಿ ಮೊದಲ ಬಾರಿಗೆ ೧೨ನೇ ಶತಮಾನದಲ್ಲಿ ಬಸವಾದಿ ಪ್ರಮಥರು ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡಿ ವಚನಚಳುವಳಿ ಕಟ್ಟಿದರು. ಮಹಿಳೆಯರ ಹಕ್ಕುಗಳಿಗಾಗಿ ಮತ್ತು ಮಹಿಳೆಯರ ಶಿಕ್ಷಣಕ್ಕಾಗಿ ಜ್ಯೋತಿಬಾಪುಲೆ, ರಾಜಾರಾಮ್ ಮೋಹನ್‌ರಾಯ್ ಮುಂತಾದವರು ಮಾಡಿದ ಹೋರಾಟ ಮತ್ತು ತ್ಯಾಗಗಳನ್ನು ನಾವು ಸ್ಮರಿಸಬೇಕು ಎಂದು ತಿಳಿಸಿದರು.

ಒಂದನೇ ಹೆಚ್ಚುವರಿ ಜಿ ಮತ್ತು ಸತ್ರ ನ್ಯಾಯಾಧೀಶ ವಿಜಯಾನಂದ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ರೇಷ್ಮಾ, ವಕೀಲರಾದ ಟಿ.ಆರ್. ಗುರುಬಸವರಾಜ್, ಬಿ.ಎಂ. ಹನುಮಂತಪ್ಪ, ನಾಗಮಣಿ ಹಂಪಾಳಿ, ಅನಿತಾ ಸಿ.ಪಿ. ಮಾತನಾಡಿದರು.

ಹಿರಿಯ ವಕೀಲರಾದ ರೇಖಾ ಖಮಿತ್ಕರ್, ನೇತ್ರಾವತಿ, ಅನಿತಾ, ಸಿ.ಪಿ.ಅನಿತಾ, ಮಹಾದೇವಿ ಹಿರೇಮಠ್, ಭಾಗ್ಯಲಕ್ಷ್ಮಿ ಆರ್. ನ್ಯಾಯಾಧೀಶರಾದ ನಿವೇದಿತಾ, ರೇಷ್ಮಾ,ಗಾಯಿತ್ರಿ, ನಾಜಿಯಾ ಕೌಸರ್, ವಾಸಂತಿ ಉಪ್ಪಾರ್ ಇವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಅನ್ನಪೂರ್ಣೇಶ್ವರಿ, ಸುಜಿದಾಬಾನು ಉಪಸ್ಥಿತರಿದ್ದರು.
ಜಿ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್. ಟಿ.ಹೆಚ್.ಮಧುಸೂದನ್, ನಾಗರಾಜ್ ಎಲ್.,ನೀಲಕಂಠಯ್ಯ ಕೆ.ಎಂ., ರಾಘವೇಂದ್ರ ಎಂ., ಸಂತೋಷ್ ಕುಮಾರ್ ಜಿ.ಜೆ., ಇತರೆ ವಕೀಲರು ಹಾಜರಿದ್ದರು.

TAGGED:Change the way you look at womenDavanagere Newsdinamaana.comದಾವಣಗೆರೆ ಸುದ್ದಿದಿನಮಾನ.ಕಾಂಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ
Share This Article
Twitter Email Copy Link Print
Previous Article Election to Davangere Lok Sabha Constituency: Implementation of Code of Conduct ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ನೀತಿ ಸಂಹಿತೆ ಜಾರಿ
Next Article To the Karnataka State Drug and Sales Representative Association Election of new officers ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ನೆಲದ ಚದುರಿದ ಚಿತ್ರಗಳು

ಸಂವಿಧಾನವನ್ನು ಅಪಾರ್ಥ ಮಾಡಿಕೊಳ್ಳುವವರಿಗಿಂತ,ಅರ್ಥಮಾಡಿಕೊಂಡು ಅಸಹನೆಯನ್ನು ಆಸ್ಫೋಟಿಸುವವರ ಸಂಖ್ಯೆ ಹೆಚ್ಚಾಗ್ತಿರೋದು ಈ ಹೊತ್ತಿನ ದುರಂತ.  ಜಾತ್ಯತೀತತೆ ಧರ್ಮವನ್ನು ರಾಜಕಾರಣದಿಂದ,  ಸಾಹಿತ್ಯದಿಂದ,ಸಾರ್ವಜನಿಕ ಕ್ಷೇತ್ರಗಳಿಂದ …

By Dinamaana Kannada News

ದೇವೇಗೌಡರು ಮೋದಿ ಹೊಗಳುತ್ತಿರುವುದು ಆಶ್ಚರ್ಯ : ಸಿಎಂ

ಬೆಂಗಳೂರು, ಮಾರ್ಚ್ 10: ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

By Dinamaana Kannada News

Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ

ದಾವಣಗೆರೆ  (Davanagere) : ಮಲ್ಲಿಕಾರ್ಜುನ ಕಡಕೋಳ ಅವರನ್ನು ದಾವಣಗೆರೆ ವೃತ್ತಿ ರಂಗಾಯಣ (Vritti Rangayana)ದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?