ದಾವಣಗೆರೆ :
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಹಿರಿಯ ವಕೀಲ ಅನೀಶ್ ಪಾಷ ನೇಮಕಗೊಂಡಿದ್ದಾರೆ.
ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅನುಕೂಲವಾಗುವಂತಹ ಅರ್ಹ ಫಲಾನುಭವಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಿಸುವ ಸಲುವಾಗಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪ ಇವರುಗಳ ಶಿಫಾರಸ್ಸಿನ ಮೇರೆಗೆ ಹಿರಿಯ ವಕೀಲ ಅನೀಶ್ ಪಾಷ ಅವರನ್ನು ನೇಮಕ ಮಾಡಲಾಗಿದೆ.
ಸಮಿತಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ . ಖಾತ್ರಿಪಡಿಸಿ ಹಾಗೂ ಅನುಷ್ಠ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಇವರು ಗಮನ ಹರಿಸಲಿದ್ದಾರೆ