ದಾವಣಗೆರೆ:
ದಾವಣಗೆರೆ ನಗರದಲ್ಲಿ ಕೆಲವು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಯುವಕರು ಹಾಗೂ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ಗಲಭೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿಯವರ ನೇತೃತ್ವದಲ್ಲಿ ಗಲಭೆ ಸೃಷ್ಠಿಸುವ ಉದ್ದೇಶದಿಂದ ರಾತ್ರಿ ವೇಳೆ ಸುಖಾಸುಮ್ಮನೆ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಅಸಭ್ಯವಾಗಿ ಮಾತನಾಡುತ್ತಾ ಕೆಲವರನ್ನು ನಿಂದಿಸುತ್ತಾ ಓಡಾಡುತ್ತಿದ್ದು, ಈ ಬಗ್ಗೆ ಸ್ಥಳದಲ್ಲಿರುವ ಪೊಲೀಸರು ಎಚ್ಚರಿಕೆ ನೀಡಿದರೂ ಸಹ ಗೊಂದಲ ಸೃಷ್ಠಿಸುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯರಾದ ಎ.ನಾಗರಾಜ್, ಚಮನ್ ಸಾಬ್, ಮೈನುದ್ದಿನ್, ಡೋಲಿ ಚಂದ್ರು, ಮೊಟ್ಟೆ ದಾದಾಪೀರ್, ಹರೀಶ್, ಆಮ್‍ಆದ್ಮಿ ಪಕ್ಷದ ಶಿವಕುಮಾರ್ ಸೇರಿದಂತೆ ಹಲವರಿದ್ದರು.