Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ
Blog

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ

Dinamaana Kannada News
Last updated: March 30, 2024 1:46 pm
Dinamaana Kannada News
Share
CM Siddaramay
CM Siddaramay
SHARE

ಬೆಂಗಳೂರು :
ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ದೇವೇಗೌಡರಿಗೆ ಕುಟುಕಿರುವ ಅವರು, ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನ: ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ ಎಂದು ಹೇಳಿದ್ದಾರೆ.

ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ.

ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ?. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ “ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಕಿಡಿಕಾರಿದರು.

ಸನ್ಮಾನ್ಯ ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು `’ನಾವು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಕನ್ನಡ-ಕರ್ನಾಟಕ ವಿರೋಧಿ ನಾಯಕನಿಗೆ ಈ ರೀತಿ ಶರಣಾಗುವುದು ಸಮಸ್ತ ಕನ್ನಡಿಗರಿಗೆ ಮಾಡುವ ದ್ರೋಹ ಎಂದು ನಿಮಗೆ ಅನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಾದೇಶಿಕ ಆಶೋತ್ತರಗಳನ್ನು ಪ್ರತಿಪಾದಿಸಿಕೊಂಡು ಕೇಂದ್ರದ ಅಧಿಪತ್ಯವನ್ನು ಪ್ರಶ್ನಿಸುತ್ತಾ ಬಂದ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಈ ರೀತಿಯ ರಾಜಕೀಯ ರಾಜಿ ಮಾಡಿಕೊಳ್ಳುವಂತೆ ಮಾಡಿದ ಶಕ್ತಿ ಮತ್ತು ವ್ಯಕ್ತಿ ಯಾರೇ ಇರಬಹುದು, ಆದರೆ ದೇವೇಗೌಡರು, ಕೇವಲ ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡು ಸಮಸ್ತ ಆರುವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ದ್ರೋಹಕ್ಕಾಗಿ ದೇವೇಗೌಡರು ಮತ್ತು ಅವರ ಪಕ್ಷ ಭಾರಿ ಬೆಲೆ ತೆರಲಿರುವುದು ಖಚಿತ ಎಂದು ಹೇಳಿದ್ದಾರೆ.

TAGGED:but a mirror's natural self-esteem.Comdinamaanadinamaana.com.davanagere newsmine is not prideಕನ್ನಡಿಗನ ಸಹಜ ಸ್ವಾಭಿಮಾನ: ದಿನಮಾನ.ಕಾಂ.ದಿನಮಾನ.ಕಾಂ.ದಾವಣಗೆರೆ ಸುದ್ದಿನನ್ನದು ಗರ್ವ ಅಲ್ಲ
Share This Article
Twitter Email Copy Link Print
Previous Article dvg ಕುಡಿಯುವ ನೀರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ : ಡಿಸಿ
Next Article dss former ನೀಲಿ ಟವೆಲ್ಲು…ಹಸಿರು ಶಾಲೂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ದಾವಣಗೆರೆ; ಸೆ.21 (Davanagere) : ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭವಾಗಿದ್ದು ಇವರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಇದಕ್ಕಾಗಿ…

By Dinamaana Kannada News

ಇದು ಕೇವಲ ಸ್ಮಾರಕ ಅಲ್ಲ. ಕಲಾವಿದರ ಸ್ಫೂರ್ತಿಯ ತಾಣ: ಕೆವಿಪಿ

ಚಿತ್ರದುರ್ಗ(ಹರ್ತಿಕೋಟೆ)ಮಾ 10: ಕೆ.ಆರ್.ತಿಪ್ಪೇಸ್ವಾಮಿ ಅವರದ್ದು ಸಾಂಸ್ಕೃತಿಕ ರಾಜಕಾರಣದಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ಬಹಳ ಸ್ಪಷ್ಟತೆ ಹೊಂದಿದ್ದ ವ್ಯಕ್ತಿತ್ವ ಎಂದು ಮುಖ್ಯಮಂತ್ರಿಗಳ ಮಾಧ್ಯಮ…

By Dinamaana Kannada News

You Might Also Like

Political analysis
Blogರಾಜಕೀಯ

Political analysis | ಕುಮಾರಣ್ಣಂಗೂ ಈಗ ವಿಜಯೇಂದ್ರ ಬೇಕಿಲ್ಲ

By Dinamaana Kannada News
Davanagere rain report
Blog

ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

By Dinamaana Kannada News
Bhadra dam
Blog

ಭದ್ರಾ ಜಲಾಶಯದಲ್ಲಿ 178.9 ಅಡಿ ನೀರು

By Dinamaana Kannada News
Blog

ವಾರದ ಕಥೆ | ಗೊಡ್ನಳ್ಳಿ ಬಸವಣ್ಣ : ಜಗದೀಶ ಕೆ. ಬಳಿಗೇರ

By ಜಗದೀಶ ಕೆ. ಬಳಿಗೇರ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?