Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ
ತಾಜಾ ಸುದ್ದಿ

28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ

Dinamaana Kannada News
Last updated: April 16, 2024 4:14 am
Dinamaana Kannada News
Share
B.S.Yadiyurappa DVG
ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಗಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.
SHARE

ದಾವಣಗೆರೆ :  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಶ್ರೀಮತಿ ಗಾಯಿತ್ರಿ ಸಿದ್ಧೇಶ್ವರ್ ಅವರು 1.5 ರಿಂದ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ  ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಗಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಈಗಾಗಲೇ 18-20 ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿ, ಇಂದು ದಾವಣಗೆರೆ ಬಂದಿದ್ಧೇನೆ. ಎಲ್ಲೆಡೆಯೂ, ಎಲ್ಲರ ಬಾಯಿಯಲ್ಲಿ ಮೋದಿ ಮೋದಿ ಎಂಬ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್ಗೆ ತಾಕತ್ತಿದ್ದರೆ ತಾವು ಗೆಲ್ಲುವ ಒಂದೆರಡು ಕ್ಷೇತ್ರದ ಹೆಸರು ಹೇಳಲಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲಿದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತಿದೆ. ಆದರೆ, ಈಗ ಕಾಂಗ್ರೆಸ್ನ ಆಟ ನಡೆಯುವುದಿಲ್ಲ. ಜನ ಬುದ್ಧಿವಂತರಾಗಿದ್ದಾರೆ. ಮೋದಿ ಜೀ ಅವರ ಆಡಳಿತ ಮೆಚ್ಚಿಕೊಂಡಿದ್ದಾರೆ. ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು, ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗುವುದು ನಿಶ್ಚಿತ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಗಾಯಿತ್ರಿ ಸಿದ್ದೇಶ್ವರ್ ಅವರು ಇಲ್ಲಿ ಗೆಲ್ಲುವುದು, ನರೇಂದ್ರ ಮೋದಿ ಅವರ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದರು.

ಇಲ್ಲಿ ಸೇರಿರುವ ಜನ ಸಮೂಹವನ್ನು ನೋಡಿದರೆ ಗಾಯಿತ್ರಿ ಸಿದ್ದೇಶ್ವರ್ ಅವರು ಈಗಾಗಲೇ 1.5 ರಿಂದ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎನ್ನುವುದು ಸ್ಪಷ್ಟವಾಗಿದೆ. ನೀವೆಲ್ಲರೂ ಇಂದಿನಿಂದಲೇ ಗ್ರಾಮದ ಮನೆ ಮನೆಗೂ ಹೋಗಿ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಬೇಕು. ಮೋದಿ ಸರ್ಕಾರ, ವಿಕಸಿತ ಭಾರತ, ವಿಕಸಿತ ದಾವಣಗೆರೆ ನೀವು ಮುನ್ನುಡಿ ಬರೀಬೇಕು ಎಂದು ಕರೆ ನೀಡಿದರು.

ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಮಾತನಾಡಿ, ದೇಶದ 80 ಕೋಟಿ ಜನರಿಗೆ 5 ಕೆಜಿ ಉಚಿತ ಪಡಿತರ ನೀಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಕೇಂದ್ರ ಸರ್ಕಾರ ನೀಡುತ್ತಿರುವ ಅಕ್ಕಿಯ ಮೂಟೆ ಮೇಲೆ ಕಾಂಗ್ರೆಸ್ ತನ್ನ ಹೆಸರು ಹಾಕಿಕೊಳ್ಳುತ್ತಿದೆ. ನರೇಂದ್ರ ಮೋದಿ ಅವರಿಗೆ ಸಮನಾದ ನಾಯಕ ಕಾಂಗ್ರೆಸ್ನಲ್ಲಿ ಇಲ್ಲ. ನಾವು ಧೈರ್ಯದಿಂದ ಹೇಳುತ್ತೇವೆ. ನಮ್ಮ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜೀ ಅಂತ.. ಕಾಂಗ್ರೆಸ್ ನವರಿಗೆ ತಾಕತ್ ಇದ್ದರೆ ತಮ್ಮ ಪ್ರಧಾನಿ ಅಭ್ಯರ್ಥಿ ಹೆಸರು ಹೇಳಲಿ ಎಂದು ಸವಾಲು ಹಾಕಿದರು.

ದೇಶದಲ್ಲಿ ಮೋದಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿರುವ ಕೆಲಸಗಳು, ದಾವಣಗೆರೆಯಲ್ಲಿ ಜಿ.ಎಂ.ಸಿದ್ಧೇಶ್ವರ್ ತಂದಿರುವ ಯೋಜನೆಗಳನ್ನು ಗಮನಿಸಿ ಜನ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ನೀವು ನೀಡುವ ಒಂದೊಂದು ಮತ ದೇಶದ ಬದಲಾವಣೆ, ರಕ್ಷಣೆ, ವಿಶ್ವಗುರು ಮಾಡುತ್ತಿದೆ. ಮಹಿಳಾ ಸಬಲೀಕರಣ, ಯುವ ಶಕ್ತಿ ಬಲಪಡಿಸಲು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಶಯ. ನೀವು ನನ್ನ ಕಮಲದ ಗುರುತಿಗೆ ಮತ ಹಾಕುವ ಮೂಲಕ ನನ್ನನ್ನು ಗೆಲ್ಲಿಸಿ, ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ಎಂಎಲ್ಸಿ ರವಿಕುಮಾರ್, ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಲಿಂಗಣ್ಣ, ಬಸವರಾಜ್ ನಾಯ್, ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾಜ್ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಜೆಡಿಎಸ್ ಮುಖಂಡ ತೇಜಸ್ವಿ ಪಟೇಲ್, ಹಾರಿಕಾ ಮಂಜುನಾಥ್, ಮಾಡಳ್ ಮಲ್ಲಿಕಾರ್ಜುನ್, ಮಹಿಮಾ ಜೇ ಪಟೇಲ್, ದೇವೇಂದ್ರಪ್ಪ, ಶಿವಾನಂದಮೂರ್ತಿ, ಜಿ.ಎಸ್. ಶ್ಯಾಮ್, ಜೆಡಿಎಸ್ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಮತ್ತು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿಸದ್ದರು.

TAGGED:After the Lok Sabha elections the Congress will be reduced to dust .Davanagere Newsdinamaana.comದಾವಣಗೆರೆ ಸುದ್ದಿದಿನಮಾನ.ಕಾಂಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ .
Share This Article
Twitter Email Copy Link Print
Previous Article increase voting ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ
Next Article Loksabha election ಲೋಕಸಭಾ ಚುನಾವಣೆ  9 ನಾಮಪತ್ರ ಸಲ್ಲಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ

ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರಸನ್ನಕುಮಾರ ಅವರು ರಾಜ್ಯಮಟ್ಟದ ಸರ್ ಸಿ.ವಿ.ರಾಮನ್…

By Dinamaana Kannada News

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?