Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯ
ತಾಜಾ ಸುದ್ದಿ

ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯ

Dinamaana Kannada News
Last updated: May 17, 2024 5:16 am
Dinamaana Kannada News
Share
harihara
ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯಿಸಿ ತಾಲೂಕು ಪ್ರೌಡಶಾಲಾ ಸಹ ಶಿಕ್ಷಕರ ಸಂಘ ದಿಂದ ಮನವಿ
SHARE

ಹರಿಹರ:  ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯಿಸಿ ತಾಲೂಕು ಪ್ರೌಡಶಾಲಾ ಸಹ ಶಿಕ್ಷಕರ ಸಂಘ ದಿಂದ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಹನುಮಂತಪ್ಪನವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ತಾಲೂಕು ಪ್ರೌಡಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಈಶಪ್ಪ ಬೂದಿಹಾಳ್ ಪುನರ್ಬಲನ ತರಗತಿಗಳನ್ನು ತೆಗೆದುಕೊಳ್ಳಲು ಸಹಶಿಕ್ಷಕರು ಶಾಲಾ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶಿಸಿರುವುದು ಗಮನಕ್ಕೆ ಬಂದಿದ್ದು, ಈ ವಿಚಾರವು ಶಿಕ್ಷಕರ ಸಮುದಾಯದಲ್ಲಿ ತೀವ್ರ ಅಸಮಾಧಾನ, ಆಕ್ರೋಶಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದರು.

ಶಿಕ್ಷಣ ಇಲಾಖೆ ರಜಾ ಸಹಿತ ಇಲಾಖೆಯಾಗಿದ್ದರೂ ಸಹಶಿಕ್ಷಕರು ರಜೆ ಅವಧಿಯಲ್ಲಿ ಏಪ್ರಿಲ್ ತಿಂಗಳು ಬಹುತೇಕ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳಿಸಿರುತ್ತಾರೆ. ಅಲ್ಲದೆ ಚುನಾವಣಾ ಕರ್ತವ್ಯಗಳು ಚೆಕ್ ಪೋಸ್ಟ್, ಸೆಕ್ಟರ್, ಮಾಸ್ಟರ್ ಟ್ರೈನರ್ ಐ.ಎಲ್.ಓ ನಿಯೋಜನೆ ಹೀಗೆ ಹಲವಾರು ನಿಯೋಜನೆ ಕರ್ತವ್ಯಗಳಲ್ಲಿಯೂ ರಜಾ ಅವಧಿಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಅಲ್ಲದೆ ಶೈಕ್ಷಣಿಕ ಅವಧಿಯಲ್ಲಿಯೂ ಶಿಕ್ಷಕರು ಪಾಠಬೋಧನೆ ಪರೀಕ್ಷೆಗಳ ಆಯೋಜನೆ ಪ್ರತಿ ದಿನ ವಿಶೇಷ ತರಗತಿ, ಗುಂಪು ಅಧ್ಯಯನ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಗಮನ ನೀಡುವುದು. ಪಾಸಿಂಗ್ ಪ್ಯಾಕೇಜ್ ಅಭ್ಯಾಸ ಮಾಡಿಸುವುದು, ಮಕ್ಕಳ ಮನೆ ಭೇಟಿ, ಪೋಷಕರ ಸಭೆಗಳು, ಪೋಷಕರ ಹಾಗೂ ತಾಯಂದಿರ ಸಭೆಗಳು, ವಿಷಯವಾರು ತಜ್ಞರಿಂದ ತರಬೇತಿಗಳನ್ನು  ಕೈಗೊಳ್ಳುತ್ತೇವೆ ಎಂದರು.

ವಿದ್ಯಾಥಿಗಳು ಉತ್ತೀರ್ಣರಾಗಲು ಸಹಶಿಕ್ಷಕರು ಪ್ರಯತ್ನ ಪಟ್ಟಿದ್ದರೂ ಸ್ವಲ್ಪವೂ ಶಿಕ್ಷಕರ ಮೇಲೆ ಗೌರವ ಮಾನವೀಯತೆ ಇಲ್ಲ ಎಂಬುದು ಈ ಆದೇಶ ದಿಂದ ಎದ್ದು ಕಾಣುತ್ತದೆ. ಉತ್ತಮ ಶಿಕ್ಷಣ ನೀಡುವ ಮನಸ್ಥಿತಿಯಲ್ಲಿರುವ ಶಿಕ್ಷಕರ ಹೃದಯವನ್ನು ಕದಡುತ್ತಿದ್ದು ಇಂತಹ ಆದೇಶಗಳು ಬಹುತೇಕ ಶಿಕ್ಷಕರು ಭ್ರಮನಿರಸನಗೊಂಡು ಸ್ವಯಂ ನಿವೃತ್ತಿಗೆ ಆಲೋಚನೆ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದರು.

ಶಿಕ್ಷಕರುಗಳಿಂದ ನಿರಂತರ ಮಾನಸಿಕ ಒತ್ತಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುತ್ತಾರೆ ಬಿಇಒ, ಡಿಡಿಪಿಐ ಮೂಲಕ ಶಿಕ್ಷಕರನ್ನು ರಜಾ ಅವಧಿಯಲ್ಲಿಯೂ ಒತ್ತಾಯಪೂರ್ವಕವಾಗಿ ಕರ್ತವ್ಯಕ್ಕೆ ಹಾಜರಾಗಲೂ ಹೇಳುತ್ತಿರುವುದು ಶಿಕ್ಷಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನಲೆಯಲ್ಲಿ ಮೇ 15 ರ ಬದಲು ಎಸ್‍ಎಸ್‍ಎಲ್‍ಸಿ ಪುನರ್ಬಲನ ತರಗತಿಗಳನ್ನು ಮೇ 29 ರಿಂದ ಜೂನ್ 06 ರವರೆಗೆ 10 ದಿನಗಳ ಅವಧಿಗೆ ಆಯೋಜಿಸುವುದು ಮತ್ತು ಶಿಕ್ಷಣ ಇಲಾಖೆಯನ್ನು ರಜಾ ರಹಿತ ಇಲಾಖೆ ಎಂದು ಘೋಷಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ತಾಲೂಕು ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಡಿ.ಧನ್ಯಕುಮಾರ್, ರಾಜ್ಯ ಪರಿಷತ್ ಸದಸ್ಯ ಡಿ.ಎಂ.ಮಂಜುನಾಥಯ್ಯ, ಜಿಲ್ಲಾ ಪ್ರತಿನಿಧಿ ಎಂ.ಇ.ಲಿಂಗರಾಜ್, ಮುಖ್ಯೊಪಾಧ್ಯಯ ಸಂಘದ ಬಿ.ರೇವಣನಾಯ್ಕ್ ಇದ್ದರು.

 

TAGGED:dinamaana.comLatest Kannada NewsTeachers Association.ಕನ್ನಡ ಸುದ್ದಿತಾಲೂಕು ಪ್ರೌಡಶಾಲಾ ಸಹ ಶಿಕ್ಷಕರ ಸಂಘ.ದಿನಮಾನ.ಕಾಂ
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-26 ಸಾಲಿ ಬಿಟ್ಟ ಮಕ್ಕಳು….
Next Article skp temple davanagere ಎಸ್‍ಕೆಪಿ ದೇವಸ್ಥಾನದಲ್ಲಿ ಮೇ 18 ರಂದು ವಾಸವಿ ಜಯಂತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

Davanagere | ಸರಳ ವಿವಾಹಗಳಿಗೆ ಇಸ್ಲಾಂ ಧರ್ಮ ಬೆಂಬಲ : ಸೈಯದ್ ಶಂಷುದ್ದೀನ್ ಬರ್ಕಾತಿ

ಹರಿಹರ (Davanagere) : ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?