ದಾವಣಗೆರೆ : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ದಾವಣಗೆರೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ, ಧಾರವಾಡ ಪೀಠವು 2024 ಫೆ.23 ರಂದು ನೀಡಿರುವ ಆದೇಶದಂತೆ ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿಯ ನಮೂನೆ-42 (ಬೈಲಾ) ನ್ನು ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ ದಾವಣಗೆರೆ ಜಿಲ್ಲಾ ವಕ್ಫ್ ಅಧಿಕಾರಿಗಳು ಎಂದು ತಿಳಿಸಿದ್ದಾರೆ.
ಈವರೆಗೂ ಮಾದರಿ ನಿಯಮಾವಳಿಯನ್ನು ಪಾಲಿಸದ ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿಯ ನಮೂನೆ-42 ನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ದಾವಣಗೆರೆ ಜಿಲ್ಲಾ ವಕ್ಫ್ ಕಛೇರಿಯ ಮೂಲಕ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಂಗೀಕಾರಕ್ಕಾಗಿ ಅತೀ ಶೀಘ್ರವಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.