ದಾವಣಗೆರೆ : ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಜನತೆ ಮಾರುಹೋಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ ಪರ ಮತಯಾಚನೆ ಮಾಡಿ ಮಾತನಾಡಿದರು.
ಜೂನ್ 3 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. ಬೇರೆ ಪಕ್ಷದವರಿಗೆ ಮತವನ್ನು ನೀಡಿದರೆ ಅದು ಉಪಯೋಗವಾಗದೇ ವ್ಯರ್ಥ ಆಗುವುದು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದಿದೆ. ಈ ಹಿನ್ನಲೆ ಡಿ.ಟಿ ಶ್ರೀನಿವಾಸ ಅವರಿಗೆ ಮತವನ್ನು ನೀಡಿ ಗೆಲ್ಲಿಸಬೇಕು ಎಂದರು.
ಲೋಕಸಭಾ ಕ್ಷೆತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಮಾತನಾಡಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಡಿ.ಟಿ ಶ್ರೀನಿವಾಸ್ ಅವರು ಸ್ವಂತ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಅವರ ಸಂಸ್ಥೆಯಲ್ಲಿ ಎಂಟು ಸಾವಿರಕ್ಕು ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದು ಒಂದು ಸಾವಿರಕ್ಕು ಹೆಚ್ಚು ಶಿಕ್ಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಓಡನಾಟ ಶ್ರೀನಿವಾಸ ಅವರಿಗೆ ಇರುವುದಲ್ಲದೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ 4 ವರ್ಷ ಕಾಂಗ್ರೆಸ್ ಸರ್ಕಾರ ಇರುವುದು. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ಕಾರ್ಯಗಳು ನಡೆಯಬೇಕಿದ್ದು ಡಿ.ಟಿ ಶ್ರೀನಿವಾಸ್ ಅವರಿಗೆ ಪ್ರಥಮ ಪ್ರಶಾಸ್ಥ್ಯ ಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕು ಎಂದರು.
ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಮಾತನಾಡಿ ಆಗ್ನೇಯ ಶಿಕ್ಷಕರ ಕ್ಷೇತ್ರದ ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಕಾಂಗ್ರೆಸ್ ಪಕ್ಷ ಬಲವಾಗದೆ. ಜೂ.3 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದರೆ ಜೂ. 4 ರಂದು ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಪಾರ್ಲಿಮೆಂಟ್ ಸದಸ್ಯರಾಗಿರುತ್ತಾರೆ ಎಂದ ಅವರು ಜಿಲ್ಲೆಯಲ್ಲಿ 4 ಸಾವಿರಕ್ಕು ಅಧಿಕ ಮತದಾರರಿದ್ದಾರೆ. ಜೋತಿ ಸಂಜಿವಿನಿ ಯೋಜನೆಯಡಿ ಶಿಕ್ಷಕರು ಸೇವೆ ಮಾಡುತ್ತಿದ್ದಾರೆ.
8500 ರಕ್ಕು ಹೆಚ್ಚು ಶಿಕ್ಷಕರ ನೇಮಕ ಆಗಬೇಕಿದೆ. ಅನೇಕ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿಕೆಗೆ ಕಾಂಗ್ರೆಸ್ ಬದ್ದವಾಗಿದೆ. 18 ವರ್ಷ ಪರಿಷತ್ ಸದಸ್ಯರಾದವರು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರ ಬಗ್ಗೆ ಕ್ಯಾರೆ ಎಂದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನೂರಾರು ಸಮಸ್ಯೆಗಳ ನಿವಾರಣೆಗೆ ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿಕೊಂಡರು.
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯರಾದ ಗಡಿಗುಡಾಳು ಮಂಜುನಾಥ್, ಎ.ನಾಗರಾಜ್, ಇತರರು ಇದ್ದರು.