Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ
ತಾಜಾ ಸುದ್ದಿ

ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ

Dinamaana Kannada News
Last updated: June 11, 2024 4:59 pm
Dinamaana Kannada News
Share
Davanagere AIDSO
ಎಐಡಿಎಸ್‍ಓ ಪ್ರತಿಭಟನೆ
SHARE

ದಾವಣಗೆರೆ:  ನೀಟ್ 2024ರ ಹಗರಣವನ್ನು ಖಂಡಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಐಡಿಎಸ್‍ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು ಮಾತನಾಡಿ, ಈ ವರ್ಷದ  ನೀಟ್ ಫಲಿತಾಂಶದಲ್ಲಿ 67 ಅಭ್ಯರ್ಥಿಗಳು 720 ಕ್ಕೆ 720 ಅಂಕಗಳನ್ನು ತೆಗೆದುಕೊಂಡು ಮೊದಲ ಸ್ಥಾನದಲ್ಲಿದ್ದಾರೆ.  ನೀಟ್ ಪರೀಕ್ಷೆಯ ಇತಿಹಾಸದಲ್ಲೇ ಕಾಣದಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಈ ಬಾರಿ 720 ಅಂಕಗಳನ್ನು ಪಡೆದಿದ್ದಾರೆ. ಆ ವಿದ್ಯಾರ್ಥಿಗಳಲ್ಲಿ ಹಲವರು ಒಂದೇ ಪರೀಕ್ಷಾ ಕೇಂದ್ರದಲ್ಲಿ ಇರುವುದು ಅಕ್ರಮಗಳ ಕಡೆಗೆ ಬೆರಳು ಮಾಡಿ ತೋರಿಸುತ್ತದೆ ಎಂದರು.

ನೀಟ್ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿರುವ ಕಾರಣ ಗಳಿಸಲು ಸಾಧ್ಯವೇ ಇಲ್ಲದಂತಹ 718, 719 ಅಂಕಗಳನ್ನು ಹಲವು ವಿದ್ಯಾರ್ಥಿಗಳ ಪಡೆದಿದ್ದಾರೆ. ಇಲ್ಲಿ ಈ ರೀತಿಯ ಫಲಿತಾಂಶಕ್ಕೆ, ಹಲವು ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವುದಾಗಿ ಹಾಗೂ ಆ ಕಾರಣದಿಂದಾಗಿ ಆ ಫಲಿತಾಂಶಗಳು ಬಂದಿರುವುದಾಗಿ ಎನ್ ಟಿ ಎ ಸಮಜಾಯಿಸಿ ನೀಡಿದೆ. ಆದರೆ ಕೃಪಾಂಕಗಳ ಬಗ್ಗೆ ಈ ಹಿಂದೆ ಎಲ್ಲಿಯೂ ಎನ್ ಟಿ ಎ ಒಂದು ನಿರ್ದಿಷ್ಟ ಮಾದರಿಯನ್ನು ನೀಡಿಲ್ಲ. ಪ್ರಶ್ನೆ ಪತ್ರಿಕೆ ತಡವಾಗಿ ನೀಡಿದ್ದಕ್ಕಾಗಿ ಕೃಪಾಂಕಾಗಳನ್ನು ನೀಡಿರುವ ಅಸಂಬದ್ಧ ಕಾರಣವನ್ನು ಕೊಟ್ಟಿರುವ ಎನ್ ಟಿ ಎಗೆ ಲಕ್ಷಾಂತರ ವಿದ್ಯಾರ್ಥಿಗಳ ಬಗ್ಗೆ ಇರುವ ನಿರ್ಲಕ್ಷ ಮತ್ತು ನಿಷ್ಕಾಕಾಳಜಿಯನ್ನು ಇದು ಎತ್ತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಕೇವಲ ಒಂದು ಹಗರಣವಲ್ಲ, ಅದು ವಿದ್ಯಾರ್ಥಿ ಸಮೂಹಕ್ಕೆ ಎಸಗಿರುವ ಘೋರ ಅಪರಾಧವೇ ಆಗಿದೆ! ಇನ್ನೊಂದೆಡೆ, ಬಿಹಾರ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೇಳಿ ಬಂದಿರುವುದು ಆತಂಕಕಾರಿ ವಿಷಯವಾಗಿದೆ ಎಂದರು.

ಕೇಂದ್ರ ಸರ್ಕಾರವು,ಈ ಹಿಂದೆ ರಾಜ್ಯವಾರು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಗೆ ನಡೆಯುತ್ತಿದ್ದ ಜಂಟಿ ಸಿಇಟಿ ಗಳಲ್ಲಿ ನಡೆಯುತ್ತಿದ್ದ ಬೃಹತ್ ಪ್ರಮಾಣದ ಭ್ರಷ್ಟಚಾರವನ್ನು ನಿಲ್ಲಿಸಲು  ಹಾಗೂ ವಿದ್ಯಾರ್ಥಿಗಳ ಹೊರೆಯನ್ನು ಕಡಿಮೆ ಮಾಡುವ ಕಾರಣಗಳನ್ನೊಡ್ಡಿ ನೀಟ್  ಪರೀಕ್ಷೆಯನ್ನು ಜಾರಿಗೊಳಿಸಿದರು. ಸರ್ಕಾರವು ಇಡೀ ದೇಶಕ್ಕೆ ಒಂದು ಪರೀಕ್ಷೆ ಎಂದು ನೀಟ್ ಪರೀಕ್ಷೆಯನ್ನು ತಂದಿತು.  ಆದರೆ ಇಂದು ಏನಾಗಿದೆ?   ನೀಟ್  ಪರೀಕ್ಷೆ ಜಾರಿಯಾದಾಗಲೇ ಎಐಡಿಎಸ್‍ಓ ಪ್ರತಿಭಟಿಸಿತ್ತು. ನೀಟ್ ಪರೀಕ್ಷೆಯ ಉದ್ದೇಶದ ಕುರಿತು ಹಲವಾರು ಆತಂಕಗಳನ್ನು ವ್ಯಕ್ತಪಡಿಸಿತ್ತು. ಅದು ಇಂದು ಸಾಬೀತಾಗಿದೆ!. ಎಂದರು.

ನೀಟ್ ಫಲಿತಾಂಶ ಬಿಡುಗಡೆಯಾದ ದಿನವೇ   ರಾಜಸ್ಥಾನದ ಕೋಟಾದಲ್ಲಿ ಒಬ್ಬ ವಿದ್ಯಾರ್ಥಿ ಅಸಹಾಯಕತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರವಾಗಿದೆ! ಈಗಾಗಲೇ ರೈತಕಾರ್ಮಿಕರು ಹಾಗೂ ದುಡಿಯುವ ವರ್ಗದ ಮಕ್ಕಳಿಗೆ ಕೈಗೆಟುಕದ ವೈದ್ಯಕೀಯ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳು ಈಗ ಭ್ರಷ್ಟ್ರಚಾರ ಹಾಗೂ ನಿರ್ಲಕ್ಷಕ್ಕೆ ತುತ್ತಾಗಿದೆ! ಬಡವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರವಿದೆ ಎಂದರು.

ಈ ಪ್ರವೇಶ ಪರೀಕ್ಷೆಗಳ ದಂಧೆಯನ್ನು ಹಾಗೂ ಈ ಬಾರಿ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ಮಟ್ಟ ಹಾಕಲು ದೇಶದಾದ್ಯಂತ ಬೃಹತ್ ವಿದ್ಯಾರ್ಥಿಗಳ ಹೋರಾಟ ನಡೆಸಲು ವಿದ್ಯಾರ್ಥಿಗಳು ಸಜ್ಜಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾಧ್ಯಕ್ಷ ರಾದ ಪೂಜಾ ನಂದಿಹಳ್ಳಿ ಮಾತನಾಡಿ, ಕೂಡಲೇ ನ್ಯಾಯಾಂಗ ತನಿಖೆ ನಡೆದು ನೀಟ್ ಪರೀಕ್ಷಾ ಫಲಿತಾಂಶದ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ. ಎಸ್., ಉಪಾಧ್ಯಕ್ಷರಾದಕಾವ್ಯ ಬಿ. ಯೋಗೇಶ್, ನಂದೀಶ್, ಗೌತಮ್,ಆಕಾಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪಾರ್ಕ್ ನಲ್ಲಿ ಕಸ ವಿಲೇವಾರಿ ಘಟಕ : ಪ್ರತಿಭಟನೆ
Next Article davanagere dc ಅಂತರಾಷ್ಟ್ರೀಯ ಯೋಗ ದಿನ : ಸಿದ್ದತೆಗೆ ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere Viraktamatha |ಇಷ್ಟಲಿಂಗ ಪೂಜೆಯಿಂದ ಮನೋವಿಕಾರ ದೂರ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davangere) : ಮಾನವನ ಅಂತರಂಗದಲ್ಲಿಯೇ  ದೇವರು ಇದ್ದಾನೆ. ನಮ್ಮೊಳಗಿರುವ ದೇವರನ್ನು ವಿಶ್ವಗುರು ಬಸವಣ್ಣನವರು  ಇಷ್ಟಲಿಂಗದ  ಮೂಲಕ ನೀಡಿದ್ದಾರೆ ಎಂದು…

By Dinamaana Kannada News

ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಅತಿಥಿ ಗೃಹ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಡಾ; ಬಿ.ಅರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಡಲಾಗುತ್ತದೆ…

By Dinamaana Kannada News

ಜನಪರ ಅಭಿವೃದ್ಧಿಯ ಸಂಶೋಧನೆಗಳಾಗಲಿ : ಪ್ರೊ.ಇಂದುಮತಿ

ದಾವಣಗೆರೆ: ಸಮಾಜದ ಎಲ್ಲ ವರ್ಗಗಳ ಸಮಗ್ರ ಸುಸ್ಥಿರ ಅಭಿವೃದ್ಧಿ ದೂರದೃಷ್ಟಿಯಿಂದ ಕೂಡಿದ ಸಂಶೋಧನೆಗಳಿಗೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?