ದಾವಣಗೆರೆ ಜೂ.14 : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ, ನಂತರದ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ.ಜಾತಿ, ಪ.ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜಾತಿ, ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳ ದೃಢೀಕೃತದೊಂದಿಗೆ ಅರ್ಜಿಯನ್ನು ಸಂಬಂಧಿಸಿದ ವಾರ್ಡನ್ ರವರಿಗೆ ಸಲ್ಲಿಸಬೇಕು.
ವೆಬ್‍ಸೈಟ್ ವಿಳಾಸ: https://swdservices.karnataka.