ದಾವಣಗೆರೆ : ನಗರದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ನಗರದ ವಿವಿಧ ಕಡೆ ಕರ್ಕಶ ದ್ವನಿ ಸೂಸುವ ಸೈಲೆನ್ಸರ್ (Defective Silencers), ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ವಾಹನ ಸವಾರರಿಗೆ ಸ್ಥಳದಲ್ಲೇ ದಂಢ ವಿಧಿಸಿದರು. ವಾಹನ ಸವಾರರಿಗೆ ಸಂಚಾರ ನಿಯಮಗಳ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಯಿತು.
ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳಿಗೆ ಸಂಬಂಧಿಸದಂತೆ ಒಟ್ಟು 25 ಪ್ರಕರಣಗಳಲ್ಲಿ 12,500 ರೂ ದಂಡ, ಹೆಲ್ಮೆಟ್ ಧರಿಸದ 105 ಪ್ರಕರಣಗಳಲ್ಲಿ 53,000 ರೂ ದಂಡ, ತ್ರಿಬಲ್ ರೈಡಿಂಗ್ 20 ಪ್ರಕರಣಗಳಲ್ಲಿ 10,000 ರೂ ದಂಡ ಸೇರಿದಂತೆ ಇತರೆ ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮುಂದೆಯೂ ಕಾರ್ಯಾಚರಣೆ ನಡೆಯಲಿದ್ದು ವಾಹನ ಸವಾರರು ಕಡ್ಡಾಯವಾಗಿ ಚಾಲನಾ ಪರವಾನಿಗೆ, ವಾಹನದ ಇನ್ಶೂರೆನ್ಸ್, ಹೊಂದಿರಬೇಕು, ವಾಹನಗಳಲ್ಲಿ ಕರ್ಕಶ ದ್ವನಿ ಸೂಸುವ ಸೈಲೆನ್ಸರ್ (Defective Silencers), ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳ ನ್ನು ಹಾಕಬಾರದು ಹಾಗೂ ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸ ಬೇಕು, ಟ್ರಿಪಲ್ ರೈಡಿಂಗ್, ಏಕಮುಖ ಸಂಚಾರ ಮಾಡಬಾರದು, ವಾಹನ ಸವಾರರು ಸೀಟ್ ಬ್ಯಾಲ್ಟ್ ಧರಿಸಿರಬೇಕು.
ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ (LED) ದೀಪಗಳನ್ನು ವಾಹನಗಳಿಗೆ ಅಳವಡಿಸಬಾರದು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ವಾಹನ ಚಾಲನೆ ಮಾಡುವ ಎಲ್ಲರೂ ಪಾಲಿಸಬೇಕು – ಒಂದು ವೇಳೆ ಸಂಚಾರ ನಿಯಮ ಪಾಲಿಸದೇ ಹೋದರೆ ಅಂತಹ ಚಾಲಕರ ಮೇಲೆ ಇದೇ ರೀತಿ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ , ಮಂಜುನಾಥ ಜಿ & ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನದಲ್ಲಿ ಸಂಚಾರ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ನಲವಾಗಲು ರವರ ನೇತೃತ್ವದಲ್ಲಿ ದಕ್ಷಿಣ ಸಂಚಾರ ಹಾಗೂ ಉತ್ತರ ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ನಗರದ ವಿವಿಧ ಭಾಗಗಳಲ್ಲಿ ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.