Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಾಲ್ಯ ವಿವಾಹ : ಪೋಷಕರ ಮೇಲೆ ಪ್ರಕರಣ ದಾಖಲಿಸಲು ಸೂಚನೆ
ತಾಜಾ ಸುದ್ದಿ

ಬಾಲ್ಯ ವಿವಾಹ : ಪೋಷಕರ ಮೇಲೆ ಪ್ರಕರಣ ದಾಖಲಿಸಲು ಸೂಚನೆ

Dinamaana Kannada News
Last updated: June 28, 2024 4:21 pm
Dinamaana Kannada News
Share
davanagere dc
davanagere dc
SHARE

ದಾವಣಗೆರೆ :    ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಪರಿಶೀಲನಾ ಸಭೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಬಾಲ್ಯವಿವಾಹ ಒಂದು ಸಾಮಾಜಿಕ ಪಿಡೂಗಾಗಿದ್ದು, ಇದನ್ನು ತಡೆಗಟ್ಟಲು ವ್ಯಾಪಕವಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳಿಂದ ಬರುವ ಜುಲೈ ತಿಂಗಳಲ್ಲಿ ಎಲ್ಲಾ  ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಅಭಿಯಾನದ ರೀತಿ ಆಯೋಜಿಸಲು ಸೂಚಿಸಿದರು.

ಕಾರ್ಮಿಕರ ಮಕ್ಕಳು, ತಾಂಡಾಗಳಲ್ಲಿ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಕುಟುಂಬಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ವರದಿಯಾಗುತ್ತಿರುವುದರಿಂದ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿ, ಬಾಲ್ಯವಿವಾಹ ನಡೆಯದೆ ಇರುವ ಮತ್ತು ಹದಿಹರೆಯದ ಬಾಲಕಿಯರು, ಗರ್ಭಿಣಿ ಆಗದೆ ಇರುವಂತಹ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ್ ಮಾತನಾಡಿ. ಮಕ್ಕಳ ಬಾಲ್ಯ ವಿವಾಹದಿಂದಾಗುವ ಪರಿಣಾಮಗಳ ಬಗ್ಗೆ ತಿಳಿಸಬೇಕು. ಬಾಲ್ಯ ವಿವಾಹ ಮಾಡುವುದರಿಂದ ಉಂಟಾಗುವ ಕಾನೂನಾತ್ಮಕ ತೊಡಕುಗಳ ಬಗ್ಗೆ ಪೋಷಕರಲ್ಲಿ ಮನವರಿಕೆ ಮಾಡಿಕೊಡಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮಾತನಾಡಿ .ಪ್ರಸಕ್ತ ಸಾಲಿನಲ್ಲಿ 2024 ರ ಏಪ್ರಿಲ್,  ಮೇ ತಿಂಗಳಲ್ಲಿ ಒಟ್ಟು 26 ದೂರುಗಳು ಬಂದಿದ್ದು, ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್‍ನಿಂದ ತಡೆಯಾಜ್ಞೆ ಪಡೆಯಲಾಗಿದೆ. 1 ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ ಹಿಂದಿನ 54, ಹೊಸದಾಗಿ 20 ಸೇರಿ 74, ಇದರಲ್ಲಿ 11 ಖುಲಾಸೆಯಾಗಿವೆ. ಪೋಕ್ಸೊದಡಿ 10 ಪ್ರಕರಣಗಳಿದ್ದು 2 ಖುಲಾಸೆಯಾಗಿ 8 ಬಾಕಿ ಇವೆ.  ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ 61 ಹಾಗೂ ಬಾಲಕರ ಬಾಲ ಮಂದಿರದಲ್ಲಿ 32 ಮಕ್ಕಳಿದ್ದಾರೆ. ಇದರಲ್ಲಿ ಅನಾಥ ಮಕ್ಕಳು, ಏಕಪೋಷಕ ಮಕ್ಕಳು, ಇಬ್ಬರು ಪೋಷಕರಿರುವ ಮಕ್ಕಳು ಇದ್ದಾರೆ ಎಂದು ತಿಳಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere  ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿ : ನ್ಯಾ.  ಮಹಾವೀರ ಮಾ. ಕರೆಣ್ಣವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್…

By Dinamaana Kannada News

Davanagere news | ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ : ಬಾಲಯೋಗಿ ಶ್ರೀ

ದಾವಣಗೆರೆ (Davanagere) : ತನ್ನವರನ್ನು ಪ್ರೀತಿಸಿ ಪರ ಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು…

By Dinamaana Kannada News

Davanagere | ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere) ಮಾ.28: ಡೇ-ನಲ್ಮ್ ಅಭಿಯಾನದಡಿ ಪ್ರಧಾನ ಮಂತ್ರಿ ಇಂಟರ್ನ್ ಶಿಪ್  ಕಾರ್ಯಕ್ರಮದಡಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?