ದಾವಣಗೆರೆ ಜು.15 : ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಾಮವಳಿಗಳು https://padmaawards.gov.in ರಲ್ಲಿ ಲಭ್ಯವಿದ್ದು, ಆಗಸ್ಟ್ 31 ರೊಳಗೆ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ uspolitical-dpar@karnataka.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.