ದಾವಣಗೆರೆ (Davangere district ) : ನಗರದ ಜಿಎಂ ವಿಶ್ವವಿದ್ಯಾಲಯದ ಎಂಸಿಎ ವಿಭಾಗದ ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಮೂರು ದಿನದ ಜೀವನ ಕೌಶಲ್ಯತೆಗಳು ಮತ್ತು ಉದ್ಯೋಗ ಕೌಶಲ್ಯತೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಾಯಿತು.
ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಇಂದಿನ ಕೈಗಾರಿಕೆಗಳು ವಿದ್ಯಾರ್ಥಿಗಳಿಂದ ಉತ್ತಮ ಶೈಕ್ಷಣಿಕ ಶೇಕಡವಾರು ಜೊತೆಗೆ ಅತ್ಯುತ್ತಮ ವ್ಯಕ್ತಿತ್ವವನ್ನು ನಿರೀಕ್ಷಿಸುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಕೌಶಲ್ಯ, ಶಿಸ್ತು, ಆಸಕ್ತಿ, ಬುದ್ಧಿವಂತಿಕೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಪಠ್ಯದ ಮಹತ್ವದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಡಿಸಿಕೊಂಡಲ್ಲಿ ಕೈಗಾರಿಕೆಗಳಿಂದ ಉತ್ತಮ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.
Read also : DAVANAGERE NEWS : ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ : ಶಾಸಕ ಕೆ.ಎಸ್.ಬಸವಂತಪ್ಪ
ಫ್ಯಾಕಲ್ಟಿ ಆಫ್ ಕಂಪ್ಯೂಟಿಂಗ್ ಅಂಡ್ ಐ ಟಿ ವಿಭಾಗದ ಡೀನ್ ಡಾ ಶ್ವೇತಾ ಮರಿಗೌಡರ್ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆಕೊಟ್ಟರು.
ಈ ತರಬೇತಿ ಕಾರ್ಯಕ್ರಮವನ್ನು ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಫ್ಯಾಕಲ್ಟಿ ಆಫ್ ಕಂಪ್ಯೂಟಿಂಗ್ ಅಂಡ್ ಐ ಟಿ ವಿಭಾಗದ ನಿರ್ದೇಶಕ ರಾಜಶೇಖರ್ ಜಿ ಸಿ, ಬಿ ಸಿ ಎ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಉಷಾ ಎನ್, ಸಂಪನ್ಮೂಲ ವ್ಯಕ್ತಿಗಳಾದ ಧಾಮೋಧರನ್ , ವಿಭಾಗದ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.