ದಾವಣಗೆರೆ (Davangere District) : ಶೋಷಿತ ಸಮುದಾಯಗಳ ಜನನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು ಅಧಿಕಾರದಿಂದ ದೂರ ಇಡಬಹುಹು ಎಂಬ ಲೆಕ್ಕಾಚಾರ ಇದರ ಹಿಂದೆ ಅಡಗಿದೆ.
ಸಿದ್ದರಾಮಯ್ಯನವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸಕಲ ಹಿಂದುಳಿದ ವರ್ಗದವರು ಅಧಿಕಾರವನ್ನು ನಡೆಸಲು ಅಸಮರ್ಥರು ಎಂದು ನಂಬಿಸುವ ಹುನ್ನಾರ ಅಡಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲು ಮತ ಮಹಾಸಭಾದ ಜಿಲ್ಲಾಸಂಚಾಲಕ ನಿಟ್ಟುವಳ್ಳಿ ಪ್ರವೀಣ್ ಕುಮಾರ್. ಎಸ್ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಕೋಮುವಾದಿಗಳ, ಮತೀಯವಾದಿಗಳು, ಪಟ್ಟಭದ್ರಾ ಹಿತಾಸಕ್ತಿಗಳು ಅಧಿಕಾರದ ದಾಹ ಮತ್ತು ಕುರ್ಚಿಯ ಆಸೆಗಾಗಿ ಜನಪರ ಇರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೊಡ್ಡಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ.
Read also : DAVANGERE : ಬಿಜೆಪಿ-ಜೆಡಿಎಸ್ ಪಿತೂರಿಗೆ ಜಗ್ಗುವುದಿಲ್ಲ : ಕೆ.ಸಿ. ವೇಣುಗೋಪಾಲ್
.ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, 15 ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವ ಸೇರಿದಂತೆ 40 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಹಲವು ಮಹತ್ವದ ಅಧಿಕಾರದ ಹುದ್ದೆಯಲ್ಲಿ ಇದ್ದರೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರ ವರ್ಚಸ್ಸಿಗೆ ಮಸಿ ಬಳೆದು ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದಂತಹ ಹಗರಣಗಳ ಬಗ್ಗೆ ಮೊದಲು ತನಿಖೆಯಾಗಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.