ದಾವಣಗೆರೆ ಆ.16 (Davanagere ) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್ ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಮತ್ತು ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 4 ಬಯೋಡಾಟಾ ಮತ್ತು ಆಧಾರ್ ನಂಬರ್ನೊಂದಿಗೆ ಹಾಜರತಕ್ಕದ್ದು,
Read also : Davanagere Crime News | ಗಾಂಜಾ ಮಾರಾಟ: ಆರೋಪಿ ಬಂಧನ
ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.