ದಾವಣಗೆರೆ (Davangere District) : ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜನ ಸಂಪರ್ಕ ಕಚೇರಿ ಆರಂಭಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಕಚೇರಿಗೆ ತಲುಪಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (MP Dr. Prabha Mallikarjun) ಹೇಳಿದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯ 31 ಮತ್ತು 32ನೇ ಕೊಠಡಿಯಲ್ಲಿ ಜನ ಸಂಪರ್ಕ ಕಚೇರಿಗೆ ಪೂಜಾ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ಈಗಾಗಲೇ ದಾವಣಗೆರೆ ಜಿಲ್ಲೆಯ ಮತ್ತು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದ್ದು ಬಹು ವರ್ಷಗಳ ಕಾಲ ಬಗೆಹರಿಯದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಿದ್ದೇವೆ ಎಂದು ತಿಳಿಸಿದರು.
Read also : Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ
ದೂಡ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಪಾಲಿಕೆ ಸದಸ್ಯರಾದ ಚಮನಸಾಬ್ , ಗಡಿಗುಡಾಳ ಮಂಜುನಾಥ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಯೂಬ್ ಪೈಲ್ವಾನ್ , ನಂದಿಗಾವಿ ಶ್ರೀನಿವಾಸ್, ಎಸ್.ಮಲ್ಲಿಕಾರ್ಜನ್, ಕೆ.ಜಿ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.