ದಾವಣಗೆರೆ, ಸೆ.2 (Davanagere) ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿಸಬೇಕು.
Read also : Davanagere news | ಹರಿಹರ ನಗರಸಭೆ : ಅಧ್ಯಕ್ಷರಾಗಿ ಕವಿತಾ ಮಾರುತಿ ಬೇಡರ್, ಉಪಾಧ್ಯಕ್ಷರಾಗಿ ಎಂ ಜಂಬಣ್ಣ
ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಹಾಕಿದ ಪ್ರತಿಯನ್ನು ಮುಖ್ಯೋಪಾಧ್ಯಾಯರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಅಥವಾ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ-37. ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ.