Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: September 15, 2024 9:50 am
Dinamaana Kannada News
Share
davanagere
davanagere
SHARE

ದಾವಣಗೆರೆ  ಸೆ 15  (Davanagere)   :  ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆ .15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೃತಕ ಬುದ್ದಿಮತ್ತೆ ಉತ್ತಮ ಸರ್ಕಾರದ ಉಪಕರಣ ಎಂಬ ಧ್ಯೇಯವಾಕ್ಯದಡಿ ಆಚರಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಆಯೋಜಿಸಲಾದ ಬೃಹತ್ ಮಾನವ ಸರಪಳಿಯಲ್ಲಿ 85 ಸಾವಿರಕ್ಕಿಂತ ಹೆಚ್ಚು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಭಾನುವಾರ ಹರಿಹರದ ಮಹಾತ್ಮ ಗಾಂಧಿ ಮೈದಾನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನ್ಯಾಮತಿ ಗಡಿಯಿಂದ 10 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 25 ಗ್ರಾಮಗಳು, 2 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಸೇರಿ ರಾಣೆಬೆನ್ನೂರು ಗಡಿವರೆಗೆ 80 ಕಿ.ಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಹಾತ್ಮ ಗಾಂಧಿ ಹಾಗೂ ಡಾ;ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

Read also :

DAVANAGERE
DAVANAGERE

Davanagere | ಈಜು ಸ್ಪರ್ಧೆ: ಈಶ್ವರಮ್ಮ ಶಾಲೆಯ ಎನ್.ಎಂ.ಛವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪ್ರಜಾಪ್ರಭುತ್ವ ಅಂದರೆ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ, ಸ್ವಾತಂತ್ರ್ಯ ಮತ್ತು ಅವಕಾಶಗಳ ಮೂರ್ತರೂಪ, ಇದು ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ.  ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಶ್ರೇಷ್ಠವೆಂದು ನಂಬಿದ್ದೇವೆ. ಜಾಗತಿಕವಾಗಿ ವಿಶ್ಲೇಷಣೆ ಮಾಡಿದಾಗ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆಯೋ ಎನಿಸುತ್ತದೆ, ಈ ನಿಟ್ಟಿನಲ್ಲಿ ಜನರು ನಿರಂತರ ಜಾಗರೂಕತೆ, ಪೋಷಣೆ ಮತ್ತು ರಕ್ಷಣೆ ಮಾಡಬೇಕಾಗುತ್ತದೆ. ಸರ್ವಾಧಿಕಾರಿ ಆಡಳಿತಗಳು ಸ್ಥಿರತೆಯ ಭರವಸೆ ನೀಡುತ್ತವಾದರೂ ದಬ್ಬಾಳಿಕೆ, ಭಯವುಂಟು ಮಾಡುತ್ತವೆ, ಜನರು ಮತದಾನ ಮೂಲಕ ತಮ್ಮ ಪ್ರಭುತ್ವತೆಯನ್ನು ಮೆರೆಯಬೇಕಾಗಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಹಾಗೂ ಸಂಸ್ಥೆಗಳ ಜವಾಬ್ದಾರಿಯ ಜೊತೆಗೆ ನಾಗರಿಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಚುನಾವಣೆಯಲ್ಲಿ ಮತ ಹಾಕುವುದಷ್ಟೆ ಮತದಾರರ ಜವಾಬ್ದಾರಿ ಮತ್ತು ಪ್ರಕ್ರಿಯೆ ಎಂದುಕೊಳ್ಳದೆ, ಸರ್ಕಾರದ ಆಗುಹೋಗುಗಳಲ್ಲಿ ನಾಗರಿಕರಾಗಿ ತೊಡಗಿಸಿಕೊಂಡು, ಇತರರ ಹಕ್ಕುಗಳನ್ನು ಗೌರವಿಸಿ ಪಾರದರ್ಶಕ ಆಡಳಿತದ ಹೊಣೆಗಾರಿಕೆ ಅರಿತುಕೊಂಡು ಆಡಳಿತ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗವುದು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಜಾಪ್ರಭುತ್ವದಲ್ಲಿ ನಾಗರಿಕರು ಕ್ರಿಯಾಶೀಲರಾಗಿ ಚುನಾವಣೆಗಳಲ್ಲಿ ಭಾಗಿಯಾಗಬೇಕು. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಲಾಗಿದೆ, ಇಂದಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಮತದಾರರಾಗಲಿದ್ದು ಎಲ್ಲರೂ ಮತದಾರರಾಗಿ ಚುನಾವಣೆಗಳಲ್ಲಿ ಪ್ರಭುದ್ದ ಮತದಾರರಾಗಿ ಭಾಗಿಯಾಗಬೇಕೆಂದು ವಿದ್ಯಾರ್ಥಿಗಳ ಕುರಿತು ಮಾತನಾಡಿದರು.

ಹರಿಹರ ಶಾಸಕ  ಬಿ.ಪಿ.ಹರೀಶ್ ರವರು ಸಂವಿಧಾನ ಪೀಠಿಕೆ  ಮಾತನಾಡಿದ ಅವರು, ವಿವಿಧ ಜಾತಿ, ಧರ್ಮ, ಭಾಷೆ, ಸಂಸ್ಕøತಿ, ಪ್ರಾಂತ್ಯಗಳನ್ನು ಹೊಂದಿದ್ದರೂ ಪ್ರಜಾಪ್ರಭುತ್ವದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ಸಂವಿಧಾನದಡಿ ಎಲ್ಲರಿಗೂ ಸಮಾನ ಹಕ್ಕುಗಳನ್ನು  ನೀಡಲಾಗಿದೆ. ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಯಶಸ್ಸನ್ನು ಸಾಧಿಸಿ ಅಭಿವೃದ್ದಿಯಲ್ಲಿ ಶ್ರೀಮಂತ ದೇಶಗಳೊಂದಿಗೆ ಸ್ಪರ್ಧೆಯಲ್ಲಿದೆ ಎಂದರು.

ಶಿವಮೊಗ್ಗ ಗಡಿ ಗ್ರಾಮ ನ್ಯಾಮತಿ ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಹರಿಹರ ತಾಲ್ಲೂಕಿನ ಹಾವೇರಿ ಜಿಲ್ಲೆಯ ಗಡಿ ಗ್ರಾಮದವರೆಗೆ 80 ಕಿ.ಮೀ ಅಂತರದಲ್ಲಿ 85 ಸಾವಿರಕ್ಕಿಂತ ಹೆಚ್ಚಿನ ಜನರು ಭಾಗಿಯಾಗಿ, ಇದರಲ್ಲಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸಮವಸ್ತ್ರ ಹಾಗೂ ವಿವಿಧ ವೇಷಭೂಷಣಗಳಲ್ಲಿ ಭಾಗಿಯಾಗಿದ್ದರು. ಸ್ವಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಕಲಾವಿದರು, ಸಂಘ, ಸಂಸ್ಥೆಯವರು, ಸರ್ಕಾರಿ ನೌಕರರು, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು ಸೇರಿದಂತೆ ಸಹಸ್ರಾರು ಮಂದಿ ರಸ್ತೆಯುದ್ದಕ್ಕೂ ಎಡಬದಿಯಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ ಸಂವಿಧಾನ ಪೀಠಿಕೆ ವಾಚನ ಮಾಡಿದರು.

ಹರಿಹರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿದ್ದಗಂಗಾ ಶಾಲೆ ವಿದ್ಯಾರ್ಥಿಗಳು ವಿನೂತನವಾಗಿ ಭಾರತ ಭೂಪಟ ರಚನೆ ಮಾಡಿದರು. ವೇದಿಕೆಯಲ್ಲಿ ಭಾಗವಹಿಸಿದ್ದ ಗಣ್ಯರು ಸಸಿಗಳನ್ನು ನೆಟ್ಟರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಸಿದ್ದಗಂಗಾ ಶಾಲೆ ಜಯಂತ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಈಜು ಸ್ಪರ್ಧೆ: ಈಶ್ವರಮ್ಮ ಶಾಲೆಯ ಎನ್.ಎಂ.ಛವಿ ರಾಜ್ಯ ಮಟ್ಟಕ್ಕೆ ಆಯ್ಕೆ
Next Article davanagere Davanagere | 22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳ್ಳೆಕಟ್ಟೆ ಕೆರೆ ಸೇರಿಸಲು ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ

ಶಿವಮೊಗ್ಗ, ಜು. 21: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಇದರಿಂದ ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ…

By Dinamaana Kannada News

ಸಪ್ತರಿಷಿ ಯೋಗಾದಾರ್ ಸ್ಪೋಟ್ರ್ಸ್ ಅಕಾಡಮಿಯ ಕ್ರೀಡಾಪಟುಗಳಿಗೆ ಐದು ಚಿನ್ನದ ಪದಕ

ಹರಿಹರ: ಗೋವಾದ ಡೆಕಾಥ್ಲಾನ್ ಆವರಣದಲ್ಲಿ ತಮಿಳುನಾಡಿನ ಸ್ಕೂಲ್ ಗೇಮ್ಸ್, ಸ್ಪೋಟ್ರ್ಸ್ ಡೆವಲಪಮೆಂಟ್ ಫೌಂಡೇಶನ್ ಆಫ್ ಇಂಡಿಯಾ ಸಂಸ್ಥೆಯಿಂದ ಮೇ 31…

By Dinamaana Kannada News

ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ

ದಾವಣಗೆರೆ  (Davanagere) :  ರಾಷ್ಟ್ರೀಯ ಬಸವ ಪ್ರತಿಷ್ಠಾನವು  ದಶಮಾನೋತ್ಸವದ ಅಂಗವಾಗಿ ಬಾಲಿ, ಮಲೇಷ್ಯಾ ಮತ್ತು ಥಾಯ್ಲೆಂಡ್‌ಗಳಲ್ಲಿ 11 ದಿನಗಳ 'ಭಾರತ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?