ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿತಾಯಿ ದುರ್ಗಾಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತವಾಗಿ ತೆರಳಿ ನವರಾತ್ರಿ ಹಾಗೂ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ತಾಯಿಗೆ ವಿಶೇಷ ಪೂಜೆಯೊಂದಿಗೆ ಸಾಂಪ್ರದಾಯಿಕವಾಗಿ ದೀಪ ಬೆಳಗಿಸಿದರು.
ಈ ಸಚಿವರ ಸಹೋದರರಾದ ಎಸ್.ಎಸ್.ಗಣೇಶ್, ಎಸ್.ಎಸ್ ಬಕ್ಕೇಶ್ ಹಾಗೂ ಕುಟುಂಬದವರು, ದೇವಸ್ಥಾನದ ಧರ್ಮದರ್ಶಿಗಳಾದ ನಾಗರಾಜ್ ಜೋಯಿಸ್, ಶ್ರೀಪಾದ ಭಟ್ಟರು, ಶಾನುಭೋಗರು ಹಾಗೂ ರೈತರು, ಬಾಬುದಾರರು, ಕಾರ್ಯಕರ್ತರು, ಪಾಲಿಕೆ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.