Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 
ತಾಜಾ ಸುದ್ದಿ

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

Dinamaana Kannada News
Last updated: October 22, 2024 5:35 pm
Dinamaana Kannada News
Share
DAVANAGERE
ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ಜಗಳೂರು ಪಟ್ಟಣದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ತಮಟೆ ಚಳುವಳಿ ನಡೆಸಿ ಗ್ರೇಡ್ ೨ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
SHARE

ಜಗಳೂರು : ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ   ಪಟ್ಟಣದಲ್ಲಿ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ತಮಟೆ ಚಳುವಳಿ ನಡೆಸಿ ಗ್ರೇಡ್ 2 ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಾಧ್ಯಕ್ಷ ಜಿ.ಎಚ್ ಶಂಭುಲಿಂಗಪ್ಪ ಮಾತನಾಡಿ, ಮಾದಿಗ ಸಮಯದಾಯ ಈ ದೇಶದ  ಮೂಲ ನಿವಾಸಿಗಳು, ಆದರೆ  ನಮ್ಮವರು ಸ್ವತಂತ್ರö್ಯವಾಗಿ ಬದುಕು ಕಟ್ಟಿಕೊಳ್ಳಲು ಪಟ್ಟಭದ್ರಾ ಹಿತಾಸಕ್ತಿಗಳು ಬಿಡುತ್ತಿಲ್ಲ. ಎಲ್ಲಾ ರಾಜ್ಯಗಳಲ್ಲಿ ಮಾದಿಗರನ್ನು ಅಸ್ಪೃಶ್ಯರೆಂಬ ಕೀಳರಿಮೆಯಿಂದ ನಡೆಸಿಕೊಂಡು ಬಂದಿದ್ದಲ್ಲದೇ ದಬ್ಬಾಳಿಕೆ ನಡೆಸಿ ದೌರ್ಜನ್ಯ, ಅತ್ಯಾಚಾರ ಮಾಡಿ ಅಮಾನವೀಯವಾಗಿ  ನಡೆಸಿಕೊಂಡಿದ್ದಾರೆ. ಅಂತ ಸಮುದಾಯಕ್ಕೆ ಡಾ.ಬಿ.ಆರ್ ಅಂಬೇಡ್ಕರ್  ಅವರು ದೇವರಂತೆ ಬಂದು ಭಾರತ ಸಂವಿಧಾನವನ್ನು ಬರೆದು ಮೀಸಲಾತಿಯನ್ನು ಕೊಟ್ಟಿದ್ದಾರೆ ಅದನ್ನು ಪಡೆಯಲು 3  ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಆದರೆ ನಮಗೆ ಇನ್ನು ನ್ಯಾಯ ಸಿಕ್ಕಿಲ್ಲ. ಹಾಗಾಗಿ ನಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದರು.

ಒಳಮೀಸಲಾತಿ ವರ್ಗಿಕರಣದಿಂದ ಎಲ್ಲ ಜಾತಿಗಳಿಗೆ ಸಮಾನ ಅವಕಾಶ ಲಭಿಸುತ್ತದೆ. ಹಾಗಾಗಿ ಹೋರಾಟಗಳನ್ನೂ ಮನಗಂಡಿದ್ದ ಸರ್ಕಾರವೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ನಡೆಸಿ ವರದಿ ನೀಡುವಂತೆ 2005 ರಲ್ಲಿ ರಚಿಸಿದ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗವು ರಾಜ್ಯದಲ್ಲಿ 101  ಎಸ್‌ಸಿ ಜಾತಿ ಸಮುದಾಯಗಳ ಕೌಟುಂಬಿಕ ಸಮೀಕ್ಷೆ ನಡೆಸಿ ಸಮಗ್ರ ಅಧ್ಯಯನದ ವರದಿಯನ್ನು 2012  ರಲ್ಲಿ ಸರಕಾರಕ್ಕೆ ಸಲ್ಲಿಸಿದ್ದಾರೆ ಅದರ ದತ್ತಾಂಶಗಳು ಸರಕಾರದ ಬಳಿ ಇದೆ ಎಂದರು.

ಚಲವಾದಿ ಸಮಾಜದ ಮುಖಂಡ ವೀರಸ್ವಾಮಿ ಮಾತನಾಡಿ, ಮಾದಿಗ ಮತ್ತು ಚಲವಾದಿ ಸಹೋದರ ಸಮುದಾಯಗಳಾಗಿವೆ. ಎರಡು ಜನಾಂಗವು ಜಾತಿ ವ್ಯವಸ್ಥೆಯಲ್ಲಿ ನೋವು ಅನುಭವಿಸಿದ್ದೇವೆ. ನ್ಯಾಯಾಲಯದ ಆದೇಶವನ್ನು ರಾಜ್ಯ ಸರ್ಕಾರ ಪರಿಗಣಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

Read also : Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಗೌರಿಪುರ ಕುಬೇರಪ್ಪ ಮಾತನಾಡಿ, ಅಹಿಂದ ನಾಯಕ ಸಿ.ಎಂ ಸಿದ್ದರಾಮಯ್ಯನವರು ಅನ್ಯಾಯಕ್ಕೆ ಒಳಗಾಗದ  ಮಾದಿಗ ಸಮುದಾಯಕ್ಕೆ ನ್ಯಾಯ ಕಲ್ಪಿಸಲು ಮುಂದಾಗಬೇಕು. ಚುನಾವಣೆಯೂ ಮುನ್ನ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿ ಮತ ಪಡೆದು ಅಧಿಕಾರಕ್ಕೆ ಬಂದ ಮೇಲೆ ನಮ್ಮ ಋಣ ತೀರಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬೆಂಗಳೂರು ವಿಧಾನ ಸೌಧವನ್ನು ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಪೂಜಾರಿ ಸಿದ್ದಪ್ಪ, ಸೂರಗೊಂಡನಹಳ್ಳಿ ಕುಬೇಂದ್ರಪ್ಪ,  ಹನುಮಂತಾಪುರ ಸತೀಶ್, ಬೈರಾನಾಯಕನಹಳ್ಳಿ ಚಂದ್ರಪ್ಪ, ನಿಬಗೂರು ಮುನಿಯಪ್ಪ, ಗುತ್ತಿದುರ್ಗ ರುದ್ರೇಶ್,  ಮೂಡಲ ಮಾಚಿಕೆರೆ ಸತೀಶ್, ಮೆದಗಿನಕೆರೆ ತಿಮ್ಮೇಶ್, ಚಲವಾದಿ ನಿಜಲಿಂಗಪ್ಪ, ಯಲ್ಲಪ್ಪ,  ಗೋಡೆ  ದುರುಗಪ್ಪ, ಪಲ್ಲಾಗಟ್ಟೆ ರಂಗಪ್ಪ,  ರೇಣುಕೇಶ್, ಗೌರಿಪುರ ಸತ್ಯಮೂರ್ತಿ   ಸೇರಿದಂತೆ ಮತ್ತಿತರರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು
Next Article DAVANAGERE Davanagere | ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

ಭದ್ರಾ ಜಲಾಶಯ: ಒಳಹರಿವು ತುಸು ಇಳಿಕೆ

ಶಿವಮೊಗ್ಗ, ಜು. 20:   ಭದ್ರಾ ಜಲಾಶಯದ ಒಳಹರಿವಿನಲ್ಲಿ ಶನಿವಾರ ತುಸು ಇಳಿಕೆ ಕಂಡುಬಂದಿದೆ. ಉಳಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ…

By Dinamaana Kannada News

ಮಹಾಜ್ಞಾನಿ ವಚನಕಾರ, ಶಿವಶರಣ ಹಡಪದ ಅಪ್ಪಣ್ಣ

ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವಮಂಟಪದ ಮಹಾನುಭಾವಿ, ಅನುಪಮಚೇತನ ಹಾಗೂ ಬಸವಣ್ಣನವರ ನಿಕಟವರ್ತಿಯಾಗಿದ್ದವರು ಹಡಪದ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?