ದಾವಣಗೆರೆ :
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಸಭೆ ನಡೆಸಿದರು.
ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರ ಶಿರಮಗೊಂಡನಹಳ್ಳಿ ನಿವಾಸದಲ್ಲಿ ಸೇರಿದ ನಾಯಕರು ದಾವಣಗೆರೆ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ನೂರಾರು ಕಾರ್ಯಕರ್ತರು ಸಿದ್ದೇಶ್ವರ ಹಠಾವೋ ಘೋಷಣೆಗಳನ್ನು ಕೂಗಿದರು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖಕ್ಕೆ ಅವಕಾಶ ನೀಡಿ ಎಂದು ವರಿಷ್ಠರಿಗೆ ಮನವಿ ಮಾಡಿದ್ದೇವು. ಆದರೆ, ಸಿದ್ದೇಶ್ವರ ಹೈಕಮಾಂಡ್ ಬಳಿ ಸುಳ್ಳು ಹೇಳಿ ಟಿಕೆಟ್ ತಂದಿದ್ದಾರೆ ಎಂದು ಕಿಡಿಕಾರಿದರು.
ಮಾಜಿ ಶಾಸಕ ಬಸವರಾಜ್ ನಾಯ್ಕ ಮಾತನಾಡಿ, ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಅವರೇ ಕಾರಣ. ಜಿ.ಎಂ. ವಾಗೀಶ್ ಸ್ವಾಮಿ ಅವರಿಗೆ ಎಸ್ಸಿ ಸರ್ಟಿಫಿಕೇಟ್ ಕೊಡಿಸಿ ಚುನಾವಣೆಗೆ ನಿಲ್ಲಿಸಿದರು. ಇರುವ ಒಂದು ಎಸ್ಸಿ ಕ್ಷೇತ್ರವನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದರು.
ಬಿಜೆಪಿಗೆ ಬಂಡಾಯದ ಬಿಸಿ : ಗಾಯಿತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ವಿರೋಧಿಸಿ ಪ್ರತಿಭಟನೆ
Leave a comment