ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ 3.30ಕ್ಕೆ ಜರುಗಿದ ಅಪಘಾತದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡು ಲಾರಿ ಡ್ರೈವರ್ ಸೇರಿದಂತೆ 5 ಜನ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು, 5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. ಸ್ಥಳಕ್ಕೆ ಪೂವ ವಲಯ ಐಜಿಪಿ ಡಾ.ರವಿಕಾಂತೇಗೌಡ , ಎಸ್ಪಿ, ಡಿವೈಎಸ್ಪಿ, ಜಿಲ್ಲಾಡಳಿತದ ಅಧಿಕಾರಿಗಳಿ ಭೇಟಿ ನೀಡಿ ಬಸ್, ಲಾರಿ ತೆರವು, ಮೃತದೇಹ ಆಸ್ಪತ್ರೆಗೆ ಸಾಗಿಸುವುದು, ಬದುಕುಳಿದವರಿಗೆ ಚಿಕಿತ್ಸೆ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
