ಚನ್ನಗಿರಿ (Channagiri) : ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸಾವರರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೋಣಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಟರಘಟ್ಟ ಗ್ರಾಮದ ಸಂದೇಶ್ ನಾಯ್ಕ್ (18) ಮೃತಪಟ್ಟ ಯುವಕ . ತಾಲೂಕಿನ ಮಂಟರಘಟ್ಟ ಗ್ರಾಮದ 9 ಜನ ಯುವಕರು ಮೂರು ಬೈಕ್‌ಗಳಲ್ಲಿ ರಂಗಯ್ಯನಗಿರಿ ದೇವಸ್ಥಾನಕ್ಕೆ ಪೂಜೆ ಮಾಡಿಸಿಕೊಂಡು ಬರಲು ಹೋಗಿದ್ದರು.
ಪೂಜೆ ಮಾಡಿಸಿಕೊಂಡು ಮಂಟರಘಟ್ಟ ಗ್ರಾಮಕ್ಕೆ ವಾಪಸ್ಸಾಗುವಾಗ ದೋಣಿಹಳ್ಳಿ-ನಲ್ಲೂರು ಮಧ್ಯದ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಈ ವೇಳೆ ಚನ್ನಗಿರಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
Read also : Malebennur | ಚಿರತೆ ದಾಳಿ : ಎಮ್ಮೆ- ಕರು ಬಲಿ
ಅಪಘಾತ ನಡೆದ ತಕ್ಷಣವೇ ಕಾರು ಚಾಲಕ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇನ್ನುಳಿದ 8 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚನ್ನಗಿರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.