ದಾವಣಗೆರೆ (Harihara): ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದ ಬಳಿ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ನಡೆದಿದೆ.
ಹೊಳೆಸಿರಿಗೆರೆ ಸುಮಾ (24) ಕಡರನಾಯ್ಕನಹಳ್ಳಿ ಪಲ್ಲವಿ (23) ಮೃತ ಯುವತಿಯರು. ಬೈಕ್ ಸವಾರ ಸಚಿನ್ (24) ಗೆ ತೀವ್ರ ಗಾಯವಾಗಿದೆ.
ಸುಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಸಚಿನ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ನಿವಾಸಿಯಾಗಿದ್ದು, ಸಂಬಂಧಿಗಳಾದ ಸುಮಾ ಹಾಗೂ ಪಲ್ಲವಿಯನ್ನ ಬೈಕ್ ಮೇಲೆ ಕರೆದುಕೊಂಡು ಬರುವಾಗ ಈ ಅವಘಡ ¸ನಡೆದಿದೆ.
Read also : ಕಠಿಣ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಸಾಧ್ಯ : ವಿನಯ್‍ಕುಮಾರ್
ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.