ದಾವಣಗೆರೆ : ಮನೆಗಳ್ಳತನ ಮಾಡಿದ ಅಂತರ್ ರಾಜ್ಯ ಕಳ್ಳರನ್ನು ವಿದ್ಯಾ ನಗರ ಪೊಲೀಸರು ಬಂಧಿಸಿ ಸುಮಾರು 15,37,800/- ರೂ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.
ರಾಜಸ್ಥಾನದ ಶ್ಯಾಮ್ ಸಿಂಗ್, ಕವರ್ ಪಾಲ್, ಪ್ರತಾಪ್ ಸಿಂಗ್ ಬಂಧಿತರು. ಆರೋಪಿಗಳಿಂದ 12,97,200/- ರೂ ಬೆಲೆಯ 162.150 ಗ್ರಾಂ ತೂಕದ ಬಂಗಾರದ ಆಭರಣಗಳು, 1,08,000/- ರೂ ಬೆಲೆಯ 1350 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು 95,600/- ರೂ ನಗದು ಹಣ 34,000/- ರೂ ಬೆಲೆಯ ಒಟ್ಟು 6 ಮೊಬೈಲ್ ಪೋನಗಳು ಹಾಗು 3000/-ರೂ ಬೆಲೆ ಎರಡು ವಾಚ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸೆ.1 ರಂದು ವಿದ್ಯಾನಗರ ಠಾಣೆಯ ವಿನಾಯಕ ಬಡಾವಣೆಯ ವಿಎಮ್‌ಜಿ ಲೇ ಔಟ್ 9 ನೇ ಕ್ರಾಸ್ ರಸ್ತೆಯಲ್ಲಿರುವ ತಮ್ಮ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದ ಸಂದರ್ಭದಲ್ಲಿ ಬಾಗಿಲು ಮುರಿದು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಠಾಣೆಗೆ ದೂರು ಸಲ್ಲಿಸಿದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ಒಳಗೊಂಡ ತಂಡ ಗುಜರಾತ್ ರಾಜ್ಯದ ಸೂರತ್ ಸಿಟಿ ಸಾರೋಲಿ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಆರೋಪಿಗಳನ್ನು ಬಂಧಿಸಿದ್ದಾರೆ.
Read also : ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ : ಶಾಸಕ ಕೆ.ಎಸ್.ಬಸವಂತಪ್ಪ
ಆರೋಪಿತರ ಹಿನ್ನೆಲೆ: ದಾವಣಗೆರೆ ಜಿಲ್ಲೆಯ ಹರಿಹರ ನಗರ ಠಾಣೆ, ಹಳಿಯಾಳ ಠಾಣೆ, ಧಾರಾವಾಡ, ತುಮಕೂರು ಬಡಾವಣೆ, ತಿಪಟೂರು, ಮದ್ಯಪ್ರದೇಶದ ಭೂಪಾಲ್ ನಲ್ಲಿ ಸೇರಿದಂತೆ ವಿವಿಧ ಕಡೆ ಆರೋಪಿತರು 06 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್. ಪಿಎಸ್‌ಐ ರೂಪಾ ತೆಂಬದ್ ಹಾಗು ಸಿಬ್ಬಂದಿಗಳಾದ ಶಂಕರ ಆರ್ ಜಾಧವ, ಆನಂದ ಎಮ್, ಬೋಜಪ್ಪ, ಗೋಪಿನಾಥ ನಾಯ್ಕ, ಮಲ್ಲಿಕಾರ್ಜುನ ಚಂದ್ರಪ್ಪ, ಬಸವರಾಜ, ಸೀಮಾ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.