Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಕ್ಕೆಜೋಳ ಖರೀದಿ ವ್ಯತ್ಯಾಸದ ಮೊತ್ತ ಪಾವತಿಸಲು ಕ್ರಮ: ಡಿಸಿ
ತಾಜಾ ಸುದ್ದಿ

ಮೆಕ್ಕೆಜೋಳ ಖರೀದಿ ವ್ಯತ್ಯಾಸದ ಮೊತ್ತ ಪಾವತಿಸಲು ಕ್ರಮ: ಡಿಸಿ

Dinamaana Kannada News
Last updated: January 8, 2026 3:11 am
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ ಮೆಕ್ಕಜೋಳ ಉತ್ಪನ್ನದ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ  ಸೂಚಿಸಿದರು.
ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ ಮೆಕ್ಕಜೋಳ ಉತ್ಪನ್ನದ ಧಾರಣೆಗೆ ನಿಯಂತ್ರಿತ ಮಾರು ಕಟ್ಟೆಗಳಲ್ಲಿ ಆಗುವ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತವನ್ನು ಪಾವತಿಸುವ ಸಂಬಂಧ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ, ಮೆಕ್ಕೆಜೋಳ ವಿಸ್ತೀರ್ಣವು 128647 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು 643235 ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಮೆಕ್ಕಜೋಳ ಉತ್ಪನ್ನದ ಧಾರಣೆಯ ಸರಾಸರಿ ದರ ಕ್ಕಿಂತ ಕಡಿಮೆ ದರಗಳಲ್ಲಿ ವಹಿವಾಟು ನಡೆಯುತ್ತಿರುವುದರಿಂದ ಮೆಕ್ಕಜೋಳ ನೋಂದಣಿ ಕಾರ್ಯವನ್ನು ಪಿಡಿಪಿಎಸ್ ಯೋಜನೆಯಡಿ ದಾವಣಗೆರೆ , ಚನ್ನಗಿರಿ, ಹರಿಹರ, ಹೊನ್ನಾಳಿ ಮತ್ತು ಜಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಅನುಷ್ಠಾನಗೊಳಿಸಲು ಸೂಚಿಸಿದರು.
ಜಿಲ್ಲೆಯಲ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಯು.ಎಂ.ಪಿ ವೇದಿಕೆಯ ಮೂಲಕ ಗರಿಷ್ಠ 2.38 ಲಕ್ಷ ಕ್ವಿಂಟಾಲ್ ವಹಿವಾಟು ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಪ್ರತಿ ಕ್ವಿಂ ಟಲ್ ಗೆ ರೂ. 1900/- ಗಳ ದರದಲ್ಲಿ ವಹಿವಾಟು ಆಗುತ್ತಿರುವುದನ್ನು ಪರಿಗಣಿಸಿ ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ ರೂ. 2150/- ಗಳನ್ನು ನಿಗದಿಪಡಿಸಿದೆ. ನಿಗದಿಪಡಿಸಿರುವ ಮಧ್ಯ ಪ್ರವೇಶ ದರ ರೂ. 2150/- ದರಕ್ಕಿಂತ ಕಡಿಮೆ ದರ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು. ಅಥವಾ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾದಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಹಾಗೂ ಪ್ರೂಟ್ ತಂತ್ರಾಂಶದಲ್ಲಿ ಲಭ್ಯವಾಗುವ ಜಮೀನಿನ ವಿಸ್ತೀರ್ಣಕ್ಕೆ ರೈತರಿಂದ ಪ್ರತಿ ಎಕರೆಗೆ 12 ಕ್ವಿಂಟಲ್ ಗಳಂತೆ ಗರಿಷ್ಠ 50 ಕ್ವಿಂಟಲ್ ಮಾತ್ರ ಪರಿಗಣಿಸಲಾಗುವುದು ತಿಳಿಸಿದರು.
ಎಥೇನಾಲ್ ಉತ್ಪಾದನೆಗಾಗಿ ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಕ್ಕೆ ಅವಶ್ಯವಿರುವ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಈ ಯೋಜನೆಯು ಅನ್ವಯಿಸದಂತೆ ತಂತ್ರಾಂಶದಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Read also : ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮೆಕ್ಕೆಜೋಳದ ಗುಣಮಟ್ಟದ ಪರೀಕ್ಷೆಯನ್ನು ಕೈಗೊಳ್ಳಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ತಾಂತ್ರಿಕ ಅಧಿಕಾರಿಗಳು ದೃಢೀಕರಿಸಲು ಅನುವಾಗುವಂತೆ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪ್ರತಿದಿನ ಮೆಕ್ಕೆಜೋಳ ನೋಂದಣಿ ಮಾಡಿಸಲು ಮಾರುಕಟ್ಟೆಗೆ ಬರುವ ರೈತರಿಗೆ ಸಂಬಂಧಿಸಿದಂತೆ ಇರುವ ಎಫ್.ಐ.ಡಿ ಗಳನ್ನು ಓರೆ ಪರಿಶೀಲನೆ ನಡೆಸಿ ದೃಢೀಕರಿಸಿಬೇಕು. ಎನ್.ಇ.ಎಂ.ಎಲ್ ಸಂಸ್ಥೆಯ ನಿಯ ಮಾನುಸಾರ ಸೇವೆಯನ್ನು ಪಡೆದು ಸದರಿ ತಂತ್ರಾಂಶದ ಮೂಲಕ ರೈತರ ನೋಂದಣಿ ಕಾರ್ಯವನ್ನು ಬಯೋಮೆಟ್ರಿಕ್ ಮೂಲಕ ಕೃಷಿ ಉತ್ಪನ್ನ ಮಾರು ಕಟ್ಟೆಗಳಲ್ಲಿ ತೆರೆಯುವ ಕೇಂದ್ರಗಳಲ್ಲಿ ಮಾತ್ರ ನೊಂ ದಾಯಿಸಿಕೊಳ್ಳುವಂತೆ ತಿಳಿಸಿದರು.
ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳು, ದುರುಪಯೋಗ, ವ್ಯತ್ಯಾಸ ಆಗದ ರೀತಿಯಲ್ಲಿ ಮತ್ತು ಮೇಲ್ವಿಚಾರಣೆ ನಡೆಸಲು ದಾವಣಗೆರೆ, ಹರಿಹರ, ಜಗಳೂರು ವ್ಯಾಪ್ತಿಗೆ ದಾವಣಗೆರೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಹೊನ್ನಾಳಿ, ಚನ್ನಗಿರಿ ಮತ್ತು ನ್ಯಾಮತಿ ವ್ಯಾಪ್ತಿಗೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರುಗಳು, ಸಹಕಾರ ಸಂಘಗಳ ಇಲಾಖೆಯ ಉಪ ನಿಬಂಧಕರು, ಆಯಾ ತಾಲ್ಲೂಕಿನ ತಹಶೀಲ್ದಾರ ರು, ಸಂಬಂಧಿಸಿದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗಳ ಕಾರ್ಯದರ್ಶಿಗಳು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವ್ಯವಸ್ಥಾಪಕರು ಮತ್ತು ಕೃಷಿ ಮಾರಾಟ ಇಲಾ ಖೆಯ ಸಹಾಯಕ ನಿರ್ದೇಶಕರುಗಳನ್ನೊಗೊಂಡ ಸದಸ್ಯರುಗಳ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
job news dinamaana ads
TAGGED:Davanagere NewsDinamana.comDistrict Collector G.M. GangadharaswamyKannada NewsMaizeಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Court ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
Next Article Davanagere ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆಗೆ ಸತೀಶ್ ಜಾರಕಿಹೊಳಿಗೆ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಬಾಲ್ಯದಲ್ಲಿಯೇ ಮಕ್ಕಳಲ್ಲಿ ಅಳಿಸಲಾಗದ ಮೌಲ್ಯಗಳನ್ನು ಬಿತ್ತಿ’: ಡಾ.ಜಿ.ಎಚ್.ಅಶಾ

ದಾವಣಗೆರೆ: ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ಬಿತ್ತುವ ಕಾರ್ಯ ಶಿಕ್ಷಕರಿಂದ ಆಗಬೇಕು. ಈ ನಿಟ್ಟಿನಲ್ಲಿ ಪ್ರಶಿಕ್ಷಣಾರ್ಥಿಗಳು ಆದರ್ಶ, ಮೌಲ್ಯಗಳನ್ನು ತಮ್ಮ ಜೀವನದಲ್ಲಿ…

By Dinamaana Kannada News

ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

ದಾವಣಗೆರೆ: ಪೌರಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವ ಪಾಲಿಕೆ ಆಯುಕ್ತರು ಮತ್ತು ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ವರ್ಗಾವಣೆ ಮಾಡದಿದ್ದರೆ…

By Dinamaana Kannada News

ದಾವಣಗೆರೆ : ಯುವಕರು ಏಡ್ಸ್ ಬಗ್ಗೆ ಜಾಗೃತಿವಹಿಸುವುದು ಅತೀ ಮುಖ್ಯ

ದಾವಣಗೆರೆ ಆ.12: ಏಡ್ಸ್ ಕುರಿತಂತೆ ಯುವಜನರಲ್ಲಿ ಜಾಗೃತಿ ಹೊಂದುವುದು ಅತೀ ಮುಖ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?