ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ ಹಾಗೂ 8 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆ : ದಿನಾಂಕ-31.10.2015 ರಂದು ಬಾಲಕಿಯ ಠಾಣೆಗೆ ಹಾಜರಾಗಿ 15 ವರ್ಷ ಅಪ್ರಾಪ್ತ ವಯಸ್ಸಿನ ಮಗಳು 26/10/2015 ರಂದು ಮನೆಯಲ್ಲಿರುವಾಗ ಆರೋಪಿ-ಶೌಕತ್ (20)ವರ್ಷ ಮನೆಯೊಳಗೆ ಪ್ರವೇಶಿಸಿ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಾಯಿಂದ ಕಚ್ಚಿ ಬಲವಂತವಾಗಿ ಅತ್ಯಾಚಾರವೆಸಗಿ ಈ ವಿಚಾರ ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿತನ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಸಂಗನಾಥ್ ಜಿ.ಆರ್ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಆರೋಪಿ ಶೌಕತ್ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿ.:21-11-2024 ರಂದು 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 8,000/-ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ
ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಸಂಗನಾಥ್ ಜಿ.ಆರ್ & ಸಿಬ್ಬಂದಿಗಳನ್ನು ಹಾಗೂ ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಶ್ರೀ ಮಂಜುನಾಥ. ಶ್ಲಾಘೀಸಿದ್ದಾರೆ.