ದಾವಣಗೆರೆ (Davanagere) : ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆ ವಿವರ : ಬಾಪೂಜಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಅದೇ ಕಾಲೇಜಿನ ವಿದ್ಯಾರ್ಥಿನಿಗೆ ತಮ್ಮ ಬಿಐಇಟಿ ಹಾಸ್ಟೆಲ್ ಹಿಂಭಾಗ ಆಂಜನೇಯ ಬಡಾವಣೆಯ ವಾಸದ ಮನೆಗೆ ಮದುವೆ ಕಾರ್ಯಕ್ರಮ ಇರುವುದಾಗಿ ಹೇಳಿ ಕರೆಸಿಕೊಂಡು ಹೋಗಿ ಅತ್ಯಾಚಾರ ಎಸಗಿ, ಯಾರಿಗಾದೂರು ಹೇಳಿದರೆ ಕೊಲೆ ಮಾಡುವುದಾಗಿ ಮತ್ತು ಇಬ್ಬರು ಜೊತೆಗೆ ಇರುವ ಪೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದು, ಪ್ರೀತಿಮಾಡುವುದಾಗಿ ನಂಬಿಸಿ ಮೋಸಮಾಡಿ ಒತ್ತಾಯದಿಂದ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಾಗಮ್ಮ ಅವರು ತನಿಖೆ ನಡೆಸಿ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‍ಟಿಎಸ್‍ಸಿ-1 ನ್ಯಾಯಾಲಯ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿ ಆರೋಪಿ ಎ1-ಇಮ್ರಾನ್ ಖಾನ್ ಮೇಲಿನ ಆರೋಪ ಸಾಬೀತಾಗಿದ್ದರಿಂದ ಅ.24 ರಂದು 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000/ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 40. 000 ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಆದೇಶಿದ್ದಾರೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿರುತ್ತಾರೆ.
Read also : Davanagere | ಪಾಲಿಕೆಯಿಂದ ನವೆಂಬರ್‌ನಲ್ಲಿ “ಕನ್ನಡ ಸ್ವಚ್ಚತಾ” ಮಾಸ : ಮಹಾಪೌರ ಚಮನ್‍ಸಾಬ್
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿಯಾದ ನಾಗಮ್ಮ .ಕೆ, ಸಿಬ್ಬಂದಿಗಳನ್ನು ಹಾಗೂ ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.