ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದಿ.08.03.2021 ರಂದು ಠಾಣೆಗೆ ಹಾಜರಾಗಿ 17 ವರ್ಷ ಅಪ್ರಾಪ್ತ ವಯಸ್ಸಿನ ಮಗಳು ದಿ.08/03/2021 ರಂದು ಮಧ್ಯಾಹ್ನ 3-30 ಗಂಟೆಗೆ ಮನೆಯಿಂದ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ವಾಪಾಸ್ ಬಂದಿರುವುದಿಲ್ಲ ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯು ಪತ್ತೆಯಾಗಿರುವುದಿಲ್ಲ ಈ ಬಗ್ಗೆ ಯರಗುಂಟೆ ನಿವಾಸಿ ನೀಲಪ್ಪನವರ್ ಕೋಟೆಪ್ಪನ ಮಗ ಮಂಜುನಾಥ ರವರ ಮೇಲೆ ಅನುಮಾನವಿದೆ ಎಂದು ಮಹಿಳಾ ಪೊಲೀಸ್ ಠಾಣೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್. ಅವರು ತನಿಖೆ ಕೈಗೊಂಡಿದ್ದು, ಅಪಹರಣಕ್ಕೊಳಗಾದ ಬಾಲಕಿಯು ಪತ್ತೆಯಾಗಿದ್ದು ತನಿಖೆ ವೇಳೆ ಆರೋಪಿಯು ಅಪ್ರಾಪ್ತ ವಯಸ್ಸಿನ ಮಗಳನ್ನು ಒಂದು ವರ್ಷದಿಂದ ಪ್ರೀತಿಸುತ್ತಿದ್ದು 08/03/2021 ರಂದು ಅಪಹರಿಸಿಕೊಂಡು ದಾವಣಗೆರೆಯಿಂದ-ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿ ಬೆದರಿಕೆ ಹಾಕಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿರುವುದು ತನಿಖೆಯಿಂದ ತಿಳಿದುಬಂದಿರುವುದರಿಂದ ದೋಷರೋಪಣಾಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿ ಆರೋಪಿ ಮಂಜುನಾಥ ಮೇಲಿನ ಆರೋಪ ಸಾಬೀತಾಗಿದ್ದರಿಂದ ನ.07 ರಂದು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000/ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 40,000/- ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಶಿಲ್ಪಾ ವೈ.ಎಸ್, ಪೊಲೀಸ್ ನಿರೀಕ್ಷಕಿ & ಸಿಬ್ಬಂದಿ, ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ವಿಜಯಕುಮಾರ ಎಂ. ಸಂತೋಷ, ಮಂಜುನಾಥ, ಜಿ ಶ್ಲಾಘಿಸಿದ್ದಾರೆ.
Read also : Harihara | ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ