ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 38 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆ ವಿವರ : 16 ವರ್ಷದ ಅಪ್ರಾಪ್ತ ವಯಸ್ಸಿನ ಮಗಳನ್ನು ಬುಳ್ಳೇನಹಳ್ಳಿ ಗ್ರಾಮದ ಬಿ.ಕೆ ರಾಜಪ್ಪರವರ ಜಮೀನಿನ ಹತ್ತಿರ ದಿ. 17/08/2022 ರಂದು ಅದೇ ಗ್ರಾಮದ ಗಾದ್ರಪ್ಪ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಗಾದ್ರಪ್ಪನಿಗೆ ಶಶಿಕುಮಾರ್, ಪಾಲಣ್ಣ , ಪ್ರಸನ್ನ , ಸುನೀಲ್ , ಓಬಣ್ಣ ಬಲತ್ಕಾರ ಮಾಡಲು ಕುಮ್ಮಕ್ಕು ನೀಡಿದ್ದು ಈ ವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಬಿಳಿಚೋಡು ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಕೆ. ಸತ್ಯನಾರಾಯಣ, ಎ1- ಗಾದ್ರಪ್ಪ ಬಲವಂತವಾಗಿ ಅಪಹರಿಸಿಕೊಂಡು ಹೋಗಿ ಅದೇ ಗ್ರಾಮದ ಬಿ.ಕೆ ರಾಜಪ್ಪ ರವರ ಜಮೀನಿನಲ್ಲಿ ಅತ್ಯಾಚಾರವೆಸಗಿದ್ದಾನೆ. ಇತರೆ ಆರೋಪಿತರು ಪ್ರಕರಣದ 1ನೇ ಆರೋಪಿಗೆ ಸಹಕಾರ ಮಾಡಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿದರು. ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿ.31-12-2024 ಆರೋಪಿ ಎ1- ಗಾದ್ರಪ್ಪ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 38,000/-ರೂ ದಂಡ ವಿಧಿಸಿದ್ದಾರೆ. ಆರೋಪಿತನಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 38,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಕೆ. ಸತ್ಯನಾರಾಯಣ , ಸಿಬ್ಬಂದಿಗಳನ್ನು ಹಾಗೂ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರನ್ನು ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ. ಸಂತೋಷ , ಮಂಜುನಾಥ. ಜಿ ಶ್ಲಾಘೀಸಿದ್ದಾರೆ.
Read also : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ