ದಾವಣಗೆರೆ (Davanagere) : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆ ವಿವರ : ಕಕ್ಕರಗೊಳ್ಳ ಗ್ರಾಮದ ಜಗದೀಶ ಎಂಬ ಯುವಕ ದಿ.25.03.2022 ರಂದು ಸಂಜೆ ಮಗಳು ಒಬ್ಬಳೇ ಇದ್ದಾಗ ಅಕ್ರಮವಾಗಿ ಮನೆ ಪ್ರವೇಶ ಮಾಡಿ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಯುವತಿ ತಂದೆ ದೂರು ದಾಖಲಿಸಿದ್ದರು.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ತನಿಖಾಧಿಕಾರಿ ಹಾರೂನ್ ಆರೋಪಿ ಜಗದೀಶ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ಅ.26 ರಂದು ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ, 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತದ 5 ಸಾವಿರ ಹಣವನ್ನು ಸಂತ್ರಸ್ಥೆಗೆ ನೀಡುವಂತೆ ಕೋರ್ಟ್ ಸೂಚಿಸಿದೆ.
Read also : Davanagere | ಯೋಗಗುರು ಡಾ.ಎನ್.ಪರಶುರಾಮಪ್ಪಗೆ `ಕರ್ನಾಟಕ ಮುಕುಟಮಣಿ’ ಪ್ರಶಸ್ತಿ
ಸರ್ಕಾರದ ಪರವಾಗಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದರು.
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಹಾರೂನ್ ಅಕ್ತರ್, ಸಿಬ್ಬಂದಿಗಳನ್ನು ವಕೀಲರಾದ ಸುನಂದ ಮಡಿವಾಳ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ, ಎಎಸ್ಪಿ ವಿಜಯಕುಮಾರ್, ಮಂಜುನಾಥ ಶ್ಲಾಘಿಸಿದ್ದಾರೆ.