Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಅಕ್ಕಪಡೆ ಬಲ:ಸಂಸದೆ ಪ್ರಭಾ ಮಲ್ಲಿಕಾರ್ಜುನ
ತಾಜಾ ಸುದ್ದಿ

ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಅಕ್ಕಪಡೆ ಬಲ:ಸಂಸದೆ ಪ್ರಭಾ ಮಲ್ಲಿಕಾರ್ಜುನ

Dinamaana Kannada News
Last updated: January 8, 2026 1:49 pm
Dinamaana Kannada News
Share
Akka Force
SHARE

ದಾವಣಗೆರೆ,ಜ. 8 : ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡಲು ಅಕ್ಕಪಡೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸಲಿದೆ ಎಂದು ಸಂಸದೆ  ಡಾ; ಪ್ರಭಾ ಮಲ್ಲಿಕಾರ್ಜುನ ಅವರು ತಿಳಿಸಿದರು.

ಜ.8 ರಂದು ಅಕ್ಕಪಡೆಯನ್ನು ಜಿಲ್ಲಾ ಪೋಲೀಸ್‌  ಕಚೇರಿ ಆವರಣದಲ್ಲಿ ಉದ್ಪಾಟಿಸಿ ಮಾತನಾಡಿದರು.

seem1 dinamaana ads

ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷಣಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ಹಿಂದೆ ಜಿಲ್ಲೆಯ ಪೋಲೀಸ್‌  ವತಿಯಿಂದ ಕಾರ್ಯನಿರ್ವಹಿಸುತ್ತಿದ್ದ ಪೆÇಲೀಸ್ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ “ದುರ್ಗಾಪಡೆ” ಯ ಕಾರ್ಯವೈಖರಿಯ ಈ ನೂತನ ಅಕ್ಕಪಡೆ ಕಾರ್ಯವೈಖರಿಯಲ್ಲಿ ಮುಂದುವರೆಯು ತ್ತದೆ ಎಂದು ತಿಳಿಸಿದರು.

ಅಕ್ಕ ಪಡೆಯ ಉದ್ದೇಶ,  ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ  ದೌರ್ಜನ್ಯ, ಹಿಂಸೆ, ಶೋಷಣೆಯಿಂದ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವುದು. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವುದು. ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಠಿಸುವುದು ಅಕ್ಕಪಡೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಅಕ್ಕ ಪಡೆಯ ಚಟುವಟಿಕೆ ಭಾಗವಾಗಿ  ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವುದು, ಮಹಿಳೆ ಮತ್ತು ಮಕ್ಕಳ ಸಂಕಷ್ಟದ ಕರೆಗಳಿಗೆ ಸ್ಪಂದಿಸುವುದು, ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು, ಸಹಾಯವಾಣಿ ಗಳ ಕುರಿತು ಶಾಲೆ, ಕಾಲೇಜು ಮಾರುಕಟ್ಟೆಗಳಲ್ಲಿ ಜಾಗೃತಿ ಅಭಿಯಾನ ನಡೆಸುವುದು. ಮಕ್ಕಳ ಕಲ್ಯಾಣ ಸಮಿತಿಗಳು, ಸಹಾಯವಾಣಿಗಳು, ಸರ್ಕಾರೇತರ ಸಂಸ್ಥೆಗಳಿಗೆ ಕಾನೂನು ನೆರವು ಮತ್ತು ಆಶ್ರಯ ತಾಣ ಗಳೊಂದಿಗೆ ಸಂಪರ್ಕ ಕಲ್ಪಿಸಿ ಸಮಾಲೋಚನೆ ನೀಡುವುದು.

Read also : ತಂಬಾಕು ದಾಳಿ ಹೆಚ್ಚಿಸಿ ದಂಡ ವಸೂಲಿಗೆ ಮಹಾವೀರ್ ಎಂ. ಕರೆಣ್ಣವರ ಸೂಚನೆ

ಅಕ್ಕಪಡೆಯ ಸಹಾಯವಾಣಿಗಳು :- 1098, 181, 112, 1930.ಈ ಸಂಖ್ಯೆಗಳಿಗೆ ಕರೆ ಮಾಡಿದ ತಕ್ಷಣ ಅಕ್ಕ ಪಡೆ ಕಾರ್ಯಪ್ರವೃತ್ತವಾಗಿ ಸ್ಪಂದಿಸಲಿದೆ. ಇದಕ್ಕೆ ಬೆಳಗ್ಗೆ 7 ರಿಂದ ಸಂಜೆ 8 ಗಂಟೆಯವರೆಗೆ ಕರೆ ಮಾಡಬಹುದಾಗಿದೆ. ಉಳಿದಂತೆ 112, 100 ಇವು ನಿರಂತರವಾಗಿರುತ್ತದೆ ಎಂದರು.

ಅಕ್ಕಪಡೆಯ ಅನುಷ್ಠಾನ  ಮತ್ತು ಕಾರ್ಯ ನಿರ್ವಹಣೆ ಸಮಿತಿ:– ಜಿಲ್ಲಾ ಪೋಲೀಸ್‌  ವರಿಷ್ಠಾಧಿಖಾರಿಗಳ ಅಧ್ಯಕ್ಷತೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರುಗಳು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಜಿಲ್ಲಾ ಪೋಲೀಸ್‌  ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜನಾಯ್ಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

job news dinamaana ads
TAGGED:Akka ForceDavanagere Newsdinamaana.comKannada NewsPrabha Mallikarjunaಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ತಂಬಾಕು ದಾಳಿ ಹೆಚ್ಚಿಸಿ ದಂಡ ವಸೂಲಿಗೆ ಮಹಾವೀರ್ ಎಂ. ಕರೆಣ್ಣವರ ಸೂಚನೆ
Next Article Sanehalli Sri ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಜನಪರವಾದ ಚಿಂತನೆಯಿತ್ತು:ಸಾಣೇಹಳ್ಳಿ ಶ್ರೀ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ದಾವಣಗೆರೆ (Davanagere):  ಕೇಂದ್ರ ಸರ್ಕಾರವು  ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ …

By Dinamaana Kannada News

ಅಭಿವೃದ್ದಿ ಪಥದಲ್ಲಿ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸಂಘ : ಜಿ.ಎಂ.ರುದ್ರಗೌಡ್ರು

ದಾವಣಗೆರೆ, ಆ 21 - ತಾಲ್ಲೂಕಿನ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸಂಘ ನಿ., 2024-25ನೇ ಸಾಲಿನಲ್ಲಿ 10,69,…

By Dinamaana Kannada News

Davanagere | ಮಹಾನಗರ ಪಾಲಿಕೆ : ಲಿಯಾಖತ್ ಅಲಿ ಎಂ.ಕೆ ರವರಿಗೆ  ಗೌರವ ಸನ್ಮಾನ

ದಾವಣಗೆರೆ  (Davanagere):  ಮಹಾನಗರ ಪಾಲಿಕೆ ಆವರಣದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಮಹಾನಗರಪಾಲಿಕೆ ಹಾಗೂ ಕನ್ನಡ ಪರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?