Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

Dinamaana Kannada News
Last updated: January 25, 2026 5:09 pm
Dinamaana Kannada News
Share
Davanagere
SHARE
ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಹಣಕಾಸು ಸೇವೆಗಳ ಇಲಾಖೆಯನ್ನು ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ಕರೆಯ ಮೇರೆಗೆ ಜನವರಿ 27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಯಲಿದೆ ಎಂದು ಯುಎಫ್‌ಬಿಯು ದಾವಣಗೆರೆ ಜಿಲ್ಲಾ ಸಂಚಾಲಕ ಮತ್ತು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ಬ್ಯಾಂಕ್ ಉದ್ಯೋಗಿಗಳ 5 ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಬರಬೇಕು ಎನ್ನುವ ಬೇಡಿಕೆಯ ಕುರಿತಾಗಿ ಈಗಾಗಲೇ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಬ್ಯಾಂಕ್ ಕಾರ್ಮಿಕ ಸಂಘಗಳ‌ ನಡುವೆ ದಿನಾಂಕ 08.03.2024 ರಂದು ಒಪ್ಪಂದವಾಗಿ ಅದರ ಅನುಮೋದನೆಗಾಗಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಗೆ ಕಳುಹಿಸಲಾಗಿತ್ತು. ಆದರೆ ಒಪ್ಪಂದವಾಗಿ 2 ವರ್ಷಗಳು ಕಳೆದರೂ, ಈ ಕುರಿತಾಗಿ ಹತ್ತಾರು ಸಭೆಗಳು ನಡೆದರೂ, ಬೇಡಿಕೆ ಈಡೇರಿಸಬೇಕು ಎಂದು ಹಲವಾರು ಪ್ರತಿಭಟನೆಗಳು ನಡೆದಿದ್ದರೂ ಸಹ ಅನಗತ್ಯವಾಗಿ ವಿಳಂಬ ಧೋರಣೆಯನ್ನು ಅನುಸರಿಸಲಾಗುತ್ತಿದೆ.
ಬೇಡಿಕೆಯ ಈಡೇರಿಕೆಗಾಗಿ ಈ ಹಿಂದೆ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಂತಹ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಯ ಉನ್ನತಾಧಿಕಾರಿಗಳು ಅತೀ ಶೀಘ್ರವಾಗಿ ಬ್ಯಾಂಕ್ ಉದ್ಯೋಗಿಗಳ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಒಂದು ವರ್ಷವೇ ಕಳೆದಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ. ಈಗ ಬ್ಯಾಂಕ್ ಉದ್ಯೋಗಿಗಳ ಸಹನೆಯ ಕಟ್ಟೆ ಒಡೆದಿದೆ‌.
Read also : ದಾವಣಗೆರೆ:ಡಾ.ಸುರೇಶ್ ಹನಗವಾಡಿ ಅವರಿಗೆ’ಪದ್ಮಶ್ರೀ’,  
ಮುಷ್ಕರದ ಹಾದಿ ಅನಿವಾರ್ಯವಾಗಿದೆ. ಪ್ರಸ್ತುತ ಬ್ಯಾಂಕ್ ಉದ್ಯೋಗಿಗಳು ಅತೀ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವ್ಯವಹಾರಕ್ಕೆ ತಕ್ಕನಾಗಿ ಉದ್ಯೋಗಿಗಳ ನೇಮಕಾತಿ ಆಗುತ್ತಿಲ್ಲ. ವಾರದ ದಿನಗಳಲ್ಲಿ ನೌಕರರು ರಾತ್ರಿ ಹತ್ತಾದರೂ ಮನೆಗೆ ಹಿಂತಿರುಗಲು ಸಾಧ್ಯವಾಗುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬಂದರೆ ನೌಕರರ ಕಾರ್ಯಕ್ಷಮತೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ. ಇದಲ್ಲದೇ ಕೇಂದ್ರ ಸರಕಾರದ ಅಧೀನದಲ್ಲಿ ಇರುವ ಹಲವಾರು ಇಲಾಖೆಗಳು, ಜೀವ ವಿಮೆ, ಸಾಮಾನ್ಯ ವಿಮೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಸೆಬಿ, ನಬಾರ್ಡ್ ಮೊದಲಾದ ಇಲಾಖೆಗಳು ವಾರಕ್ಕೆ ಐದು ದಿನ ಮಾತ್ರವೇ ಕೆಲಸ ಮಾಡುತ್ತಿವೆ‌.
ಜಾಗತಿಕ ಮಟ್ಟದಲ್ಲೂ ಬ್ಯಾಂಕುಗಳು 5 ದಿನ ಕೆಲಸ ಮಾಡುವ ವ್ಯವಸ್ಥೆ ಇದೆ. ಹೀಗಿದ್ದರೂ ಸಹ ಕೇಂದ್ರ ಹಣಕಾಸು ಇಲಾಖೆ ಅನಗತ್ಯವಾಗಿ ಕಾಲಹರಣ ಮಾಡಿ ಬ್ಯಾಂಕ್ ಉದ್ಯೋಗಿಗಳ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸೋತಿದೆ. ಆದ್ದರಿಂದ ಅನಿವಾರ್ಯವಾಗಿ ಜನವರಿ 27 ರ ಮಂಗಳವಾರ ದೇಶದಾದ್ಯಂತ ಬ್ಯಾಂಕ್ ಮುಷ್ಕರ ನಡೆಯುತ್ತಿದೆ. ಸುಮಾರು 8 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡು,  ಬೀದಿಗಿಳಿದು ಸರಕಾರದ ವಿಳಂಬ ಧೋರಣೆಯ ವಿರುದ್ಧ ಪ್ರತಿಭಟಿಸಲಿದ್ದಾರೆ.
ಜನವರಿ 24, 25 ಮತ್ತು 26 ರಂದು ಬ್ಯಾಂಕ್ ರಜೆ ಇರುವುದರಿಂದ 27 ರ ಬ್ಯಾಂಕ್ ಮುಷ್ಕರವು ಖಂಡಿತವಾಗಿ ಸಾರ್ವಜನಿಕರಿಗೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದರೆ ಈ ಸಮಸ್ಯೆಗೆ ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ, ಕೇಂದ್ರ ಹಣಕಾಸು ಸೇವೆಗಳ ಇಲಾಖೆಯೇ ನೇರವಾಗಿ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಬ್ಯಾಂಕ್ ಕಾರ್ಮಿಕ ಮುಖಂಡ ಕೆ.ರಾಘವೇಂದ್ರ ನಾಯರಿ ಹೇಳಿದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ದಾವಣಗೆರೆ:ಡಾ.ಸುರೇಶ್ ಹನಗವಾಡಿ ಅವರಿಗೆ’ಪದ್ಮಶ್ರೀ’,  
Next Article Davanagere ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಚಂಚಲ ಮನಸ್ಸು ಹತೋಟಿಗೆ ತರಲು ಶಿವಯೋಗ ಸಹಕಾರಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davangere): ಮಾನವನ ಮನಸ್ಸು ಚಂಚಲ. ಅದನ್ನು ಹತೋಟಿಗೆ ತರಲು  ಶಿವಯೋಗವನ್ನು ಮಾಡಬೇಕು. ಶಿವಯೋಗವು ನಮ್ಮ ಮನಸ್ಸಿನ ಚಂಚಲತೆಯನ್ನು ನಿವಾರಣೆ…

By Dinamaana Kannada News

ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ದಾವಣಗೆರೆ (Davanagere):  ಕೇಂದ್ರ ಸರ್ಕಾರವು  ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ …

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 45 : ಮಕ್ಕಳೂ ಅಂತರ್ಮುಖಿಗಳಾಗುವುದು ಎಂದರೆ…….

Kannada News | Sanduru Stories | Dinamaana.com | 05-06-2024 ಅಗಾಧ ಮೌನ (Sanduru Stories) ಯುದ್ಧ ಮುಗಿದ ನಂತರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?