Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ಹೃದಯಾಘಾತದಿಂದ ಎಸ್‌.ಎಂ. ಕೃಷ್ಣ ನಿಧನ; ವೈದ್ಯರಿಂದ ಮಾಹಿತಿ
ರಾಜಕೀಯ

ಹೃದಯಾಘಾತದಿಂದ ಎಸ್‌.ಎಂ. ಕೃಷ್ಣ ನಿಧನ; ವೈದ್ಯರಿಂದ ಮಾಹಿತಿ

Dinamaana Kannada News
Last updated: December 10, 2024 4:35 am
Dinamaana Kannada News
Share
SHARE

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ SM ಕೃಷ್ಣ ನಿಧನದ ಸುದ್ದಿ ಬರಸಿಡಿಲಿನಂತೆ ಬಂದೆರಗಿತ್ತು. ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು.

ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಆಗ ಅವರಿಗೆ ಹೃದಯಾಘಾತವಾಗಿತ್ತು. ಬೆಳಗ್ಗೆ 3:30ಕ್ಕೆ ವೈದ್ಯರು SM ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆಯೇ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು.

ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು. ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ರಾಜಕೀಯ ಜೀವನದ ಇಣುಕುನೋಟ ಇಲ್ಲಿದೆ.

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್​​ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.

ಪಾಂಚಜನ್ಯ ಯಾತ್ರೆಯಿಂದ ಮುಖ್ಯಮಂತ್ರಿ ಹುದ್ದೆಯತ್ತ

1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್​ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್​​ಗೆ ಶಕ್ತಿ ತುಂಬಿತ್ತು.

2004 ರ ಡಿಸೆಂಬರ್​​​ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್​ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.

ಇಳಿವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆ

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್​ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

TAGGED:ಎಸ್.ಎಂ.ಕೃಷ್ಣನಿಧನ ವಾರ್ತೆ
Share This Article
Twitter Email Copy Link Print
Previous Article Political Analysis Political Analysis | ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?
Next Article MP Dr. Prabha Mallikarjun ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳೇಕೆ ಕಲಿಕೆಯಲ್ಲಿ ಹಿಂದುಳಿಯುವರು?? : ಮಕ್ಕಳಿಗೆ ಶಿಕ್ಷೆಗಿಂತ ಪ್ರೀತಿ,ವಿಶ್ವಾಸ ಸರಿಯಾದ ಮಾರ್ಗ

Kannada News | Dinamaana.com | 28-07-2024 ಸರಿಯಾಗಿ ಕುಳಿತು ಅಭ್ಯಾಸ ಮಾಡು' ಎಂದು ತಾಕೀತು ಮಾಡಿ ಶಿಕ್ಷೆ ನೀಡಿದ…

By Dinamaana Kannada News

ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ: ಅಪರಾಧಿಗಳ ಬಂಧನಕ್ಕೆ ಆಗ್ರಹ

ಕಲಬುರ್ಗಿ :   ಕಟ್ಟಡ ಕಾರ್ಮಿಕರ ಮಹಿಳೆಯರ ಜೋಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು ಮತ್ತು ಮೃತಕುಟುಂಬಗಳಿಗೆ 10 ಲಕ್ಷ ಪರಿಹಾರ…

By Dinamaana Kannada News

Davanagere | ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Davanagere):  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳ ಮೂಲಕ ಶಿಕ್ಷಕರು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು…

By Dinamaana Kannada News

You Might Also Like

Political analysis
ರಾಜಕೀಯ

Political analysis|ಸಿದ್ದು ಗುಡುಗಿದ್ರೂ  ಸುರ್ಜೇವಾಲ ಉಳಿದಿದ್ದು ಹೇಗೆ?

By Dinamaana Kannada News
Political analysis
Blogರಾಜಕೀಯ

Political analysis | ಕುಮಾರಣ್ಣಂಗೂ ಈಗ ವಿಜಯೇಂದ್ರ ಬೇಕಿಲ್ಲ

By Dinamaana Kannada News
siddaramaiah,Rahul Gandhi, DK Sivakumar
ರಾಜಕೀಯ

Political analysis | ಸಿದ್ದು ದಿಲ್ಲಿಯಲ್ಲಿ  ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ?

By Dinamaana Kannada News
Political analysis
ರಾಜಕೀಯ

Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?