ದಾವಣಗೆರೆ ಆಗಸ್ಟ್ 13: ದಾವಣಗೆರೆ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ 26 ಅಂಗನವಾಡಿ ಕಾರ್ಯಕರ್ತೆ ಮತ್ತು 170 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷö್ಯತೆಯಲ್ಲಿ ಆಗಸ್ಟ್ 12 ರಂದು ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
Read also : ದಾವಣಗೆರೆ : ಸಹಾಯಧನ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 22 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.