Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ
ತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

Dinamaana Kannada News
Last updated: February 18, 2026 11:53 am
Dinamaana Kannada News
Share
Harihara
SHARE

ಹರಿಹರ : ಒಳ ಮೀಸಲಾತಿ ಪರಿಪೂರ್ಣ ಜಾರಿಗೊಳಿಸುವುದು, ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕದಿಂದ ಬುಧವಾರ ಮುಖ್ಯಮಂತ್ರಿಯವರಿಗೆ ಇಲ್ಲಿನ ತಹಶೀಲ್ದಾರ್ ಸಂತೋಷ್ ಕುಮಾರ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ನಂತರ ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಶೇ. 24.1ರಷ್ಟು ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಕಾಯ್ದೆಯ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ, 7 (ಸಿ) ರದ್ದುಪಡಿಸಿ 2026-27ನೇ ಬಜೆಟ್ ಅಧಿವೇಶನದಲ್ಲಿ ಆದೇಶ ಹೊರಡಿಸಬೇಕು.

ಕದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರಿಗೆ ‘ಕರ್ನಾಟಕ ರತ್ನ’ ಮರಣೋತ್ತರ ಪ್ರಶಸ್ತಿ ಘೋಷಿಸಬೇಕು ಹಾಗೂ ಅವರ ಜನ್ಮದಿನ ಜೂನ್ 9 ಅನ್ನು ರಜಾ ರಹಿತ ದಿನವನ್ನಾಗಿ ಆಚರಣೆ ಮಾಡಬೇಕು.

ದೇವದಾಸಿ, ವಿಧವೆಯರು, ವೃದ್ಧರು, ವಿಕಲ ಚೇತನರಿಗೆ ನೀಡುತ್ತಿರುವ ಮಾಸಿಕ ವೇತನ ರೂ.5000ವರೆಗೆ ಹೆಚ್ಚಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಾಸಿಕ ಭೋಜನ ವೆಚ್ಚ ರೂ.3000ವರೆಗೆ ಹೆಚ್ಚಳ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ವಸತಿ ಕಾಲೇಜುಗಳಾಗಿ ಮೇಲ್ದರ್ಜೆ ಗೇರಿಸಬೇಕು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ ಅನ್ನು ರದ್ದುಪಡಿಸಿ, ಭಾರತದಿಂದ ವಿದೇಶಗಳಿಗೆ ದನದ ಮಾಂಸದ ರಫ್ತು ನಿಲ್ಲಿಸಬೇಕು.

ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಪ್ರೊ.ಬಿ.ಕೃಷ್ಣಪ್ಪ  ಅವರ ಹೆಸರನ್ನು ಇಡಬೇಕು. ನಗರದ ಸೂಕ್ತ ಸ್ಥಳದಲ್ಲಿ ಪ್ರೊ.ಬಿ.ಕೃಷ್ಣಪ್ಪ  ಅವರ ಸ್ಮಾರಕವನ್ನು ನಿರ್ಮಿಸಬೇಕು. ಗುತ್ತೂರಿನ ಹೆಲಿಪ್ಯಾಡ್ ಜಾಗದಲ್ಲಿ ವಾಸವಿರುವ ಅಲೆಮಾರಿ ಸಮುದಾಯದವರಿಗೆ ಅಲ್ಲಿಯೆ ನಿವೇಶನಗಳನ್ನು ದೊರಕಿಸಿ, ಮನೆ ನಿರ್ಮಿಸಿ ಕೊಡಬೇಕು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ನಲ್ಲಿ 2015ರ ಆಗಸ್ಟ್ 3 ಮತ್ತು 4 ರಂದು ಹುಳು ಭರಿತ ಆಹಾರ ವಿತರಣೆ ಮಾಡಿದ ಘಟನೆಗೆ ಸಂಬಂದಿಸಿ ಸಂಬಂಧಿತ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು.

ಹೊಟ್ಟಿಗೇನಹಳ್ಳಿ ಗ್ರಾಮದ ರಸ್ತೆಗಳು ಅಕ್ರಮ ಮಣ್ಣು, ಮರಳು ಸಾಗಣೆಯಿಂದಾಗಿ ಸಂಪೂರ್ಣ ಹಾಳಾಗಿದೆ, ಆ ರಸ್ತೆಗಳನ್ನು ಹೊಸದಾಗಿ ನಿರ್ಮಿಸಬೇಕು ಹಾಗೂ ಅಕ್ರಮ ಮಣ್ಣು, ಮರಳು ಸಾಗಣೆಯನ್ನು ತಡೆಯಬೇಕು. ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಆರಂಭಿಸಬೇಕು.

ತಾಲ್ಲೂಕಿನ ಕಡ್ಲೆಗೊಂದಿ ಮತ್ತು ಭಾನುವಳ್ಳಿ ಗ್ರಾಮದ ಸರ್ಕಾರಿ ಜಾಗದಲ್ಲಿ ವಸತಿ ಯೋಜನೆ ರೂಪಸಿಬೇಕು. ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರೂ.18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಆರಂಭಿಸಬೇಕು.

ನಗರದ ಜನರ ಕುಡಿಯುವ ನೀರಿಗಾಗಿ ಪ್ರತ್ಯೇಕ ಕೆರೆ ನಿರ್ಮಿಸಬೇಕು. ನಗರದ ವಿವಿಧ ಪ್ರಕಾರದ ಮದ್ಯದ ಅಂಗಡಿಗಳನ್ನು ನಿಗದಿತ ಅವಧಿಯಲ್ಲಿ ಮಾತ್ರ ತೆರೆಯುವಂತೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

Read also : ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

ಈ ಸಂದರ್ಭದಲ್ಲಿ ಕೊಕ್ಕನೂರು ಗ್ರಾಪಂ ಸದಸ್ಯ ಹನುಮಂತಪ್ಪ, ಚೌಡಪ್ಪ ಸಿ. ಭಾನುವಳ್ಳಿ, ಅಲೆಮಾರಿ ಸಮುದಾಯದ ಮುಖಂಡ ದುರುಗಪ್ಪ, ಮಂಜುನಾಥ್ ಎಂ.ಎಸ್. ಕೊಕ್ಕನೂರು, ಹೊಸಪಾಳ್ಯ ಯುವರಾಜ್, ರಾಮಪ್ಪ ಹಿಂಡಸಘಟ್ಟ, ಧರ್ಮರಾಜ್ ಹಳ್ಳಿಹಾಳ್, ತಿಮ್ಮಣ್ಣ ಕಡ್ಲೆಗೊಂದಿ, ಸುರೇಶ್ ಕೆಂಚನಹಳ್ಳಿ, ಆಕಾಶ ಎಂ.ಆರ್., ಪುನೀತ ಎಂ.ಎಲ್., ಮಾರುತಿ, ಈರಣ್ಣ, ಚಂದ್ರು, ವಿಶ್ವ, ಮರಿಯ, ಅಭಿ, ಅರುಣ್, ಧನುಷ್ ಡಿ., ಹನುಮಂತಪ್ಪ, ಪ್ರಕಾಶ, ನಿಂಗಪ್ಪ, ದುರುಗಪ್ಪ, ವಿನಾಯಕ, ಗಿರೀಶ್, ಮಧು ಹಾಗೂ ಇತರರು ಇದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ
Share This Article
Twitter Email Copy Link Print
Previous Article Jagalore ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದ್ವಿತೀಯ ಪಿ.ಯು ಪರೀಕ್ಷೆ   ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ದಾವಣಗೆರೆ,ಏ.10  : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ…

By Dinamaana Kannada News

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

ದಾವಣಗೆರೆ ಅಗಸ್ಟ್ 29 : ಯಾವುದೇ ಹಂತದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಬಾರದು ಮತ್ತು ಶಾಲೆ, ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ…

By Dinamaana Kannada News

ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ

ದಾವಣಗೆರೆ:  ಅಧಿವೇಶನದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಾಯಕೊಂಡ ಶಾಸಕ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

By Dinamaana Kannada News
World Theater Day
ತಾಜಾ ಸುದ್ದಿ

ರಂಗಭೂಮಿ ಕಲಾವಿದರಿಗೆ ಬಂಪರ್ ಆಫರ್: ದಾವಣಗೆರೆಯಲ್ಲಿ ರಾಜ್ಯಮಟ್ಟದ ಪೌರಾಣಿಕ ಏಕವ್ಯಕ್ತಿ ಪಾತ್ರಾಭಿನಯ ಸ್ಪರ್ಧೆ! 25,000 ರೂ. ಗೆಲ್ಲುವ ಸುವರ್ಣಾವಕಾಶ

By Dinamaana Kannada News
Davanagere
ತಾಜಾ ಸುದ್ದಿ

ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?