ದಾವಣಗೆರೆ: ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ದಾವಣಗೆರೆ ಜಿಲ್ಲೆಯ ನಿವಾಸಿ ಆಗಿರಬೇಕು, ದಾವಣಗೆರೆ ಜಿಲ್ಲೆಯ ಶಾಲಾ-ಕಾಲೇಜ್ಗಳಲ್ಲಿ ಓದಿರಬೇಕು. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.
ಆನ್ಲೈನ್ ಮೂಲಕ hanjaneyacharitabletrust.in ವೆಬ್ಸೈಟ್ನಲ್ಲಿ ಜು.12ರ ಒಳಗೆ ಅರ್ಜಿ ಸಲ್ಲಿಸಬಹುದು.
ಚಿತ್ರದುರ್ಗ ನಗರದಲ್ಲಿ ಸಮಾರಂಭ ಆಯೋಜಿಸಲಾಗುವುದು. ಕಾರ್ಯಕ್ರಮದ ದಿನಾಂಕವನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಿಳಿಸಲಾಗುವುದು. ಸ್ವವಿವರದ ಜೊತೆ ಪಾಸ್ ಫೋಟೋ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 9743048006 ಅಥವಾ 8073050019 ಗೆ ಸಂಪರ್ಕಿಸಬಹುದು ಎಂದು ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.